ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಚಿತ್ರಮಂದಿರದ ಮಹಿಳಾ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಬಾಲಾಪರಾಧಿ ಬಂಧನ!

ಇನ್ನೊಬ್ಬ ಶಂಕಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಇಲ್ಲಿನ ಚಿತ್ರಮಂದಿರವೊಂದರಲ್ಲಿ ಮಹಿಳೆಯರ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಅಪ್ರಾಪ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಥಿಯೇಟರ್‌ನಲ್ಲಿ ಗಲಾಟೆ ನಡೆದ ಬಗ್ಗೆ ಭಾನುವಾರ ರಾತ್ರಿ 9.30ರ ಸುಮಾರಿಗೆ ಮಾಹಿತಿ ಲಭ್ಯವಾಗಿದೆ. ಗಸ್ತು ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಅಪ್ರಾಪ್ತ ವಯಸ್ಕ ಚಿತ್ರಮಂದಿರದ ಮಹಿಳೆಯರ ಶೌಚಾಲಯದೊಳಗೆ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ.

ಬಾಲಾಪರಾಧಿಯನ್ನು ಪೊಲೀಸರು ಜನಸಂದಣಿಯಿಂದ ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಇನ್ನೊಬ್ಬ ಶಂಕಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಘಟನೆಗೆ ಸಂಬಂಧಿಸಿದಂತೆ, ಥಿಯೇಟರ್ ನಿರ್ವಹಣೆಯನ್ನು ಸಹ ಪ್ರಶ್ನಿಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!