ಕೈ ಕೈ ಮಿಲಾಯಿಸಿದ ಸಿದ್ದು ಪಾಟೀಲ್-ಭೀಮರಾವ್ ಪಾಟೀಲ್ 
ರಾಜ್ಯ

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ ಕಾಂಗ್ರೆಸ್ MLC; Video

ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಬೀದರ್: ಕೆಡಿಪಿ ಸಭೆಯಲ್ಲಿ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಆಕ್ರೋಶಗೊಂಡ ಭೀಮರಾವ್ ಪಾಟೀಲ್, ಸಭೆಯಲ್ಲೇ ಏಕವಚನ ಬಳಿಸಿ ಶಾಸಕನನ್ನು ನಿಂದಿಸಿದ್ದಲ್ಲೇ ಸಿದ್ದು ಪಾಟೀಲ್ ಬಳಿಗೆ ತೆರಳಿ ಧಮ್ಕಿ ಹಾಕಲು ಮುಂದಾದರು.

ವಾಗ್ವಾದವು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಸಚಿವ ಈಶ್ವರ ಖಂಡ್ರೆ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!