ಬಿಜೆಪಿ ಪ್ರತಿಭಟನೆ 
ರಾಜ್ಯ

ಕೋಗಿಲು ಒತ್ತುವರಿ ತೆರವು: ಸೂರು ಕಳೆದುಕೊಂಡವರಿಗೆ ಮನೆ ನೀಡುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಬಳಿ "ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ಹೊರ ಹಾಕಿ" ಎಂಬ ಘೋಷಣೆಯಡಿಯಲ್ಲಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು.

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ಕೋಗಿಲುನಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.

ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಬಳಿ "ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ಹೊರ ಹಾಕಿ" ಎಂಬ ಘೋಷಣೆಯಡಿಯಲ್ಲಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಇತರ ಬಿಜೆಪಿ ಶಾಸಕರು, ಎಂಎಲ್‌ಸಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಬಿಜೆಪಿ ನಾಯಕ ಆರ್ ಅಶೋಕ, ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ವಂಚಿಸಿ, ಅಕ್ರಮ ವಲಸಿಗರಿಗೆ ಮನೆಗಳನ್ನು ನೀಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಕರ್ನಾಟಕದ ಭೂಮಿಯನ್ನು ರಕ್ಷಿಸುವ ಗುರಿಯನ್ನು ಈ ಪ್ರತಿಭಟನೆ ಹೊಂದಿದೆ. ರಾಜ್ಯದ ಜನರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಕೋಗಿಲುವಿನ ಪ್ರತಿಭಟನಾ ಸ್ಥಳದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಇದು ಅನ್ಯಾಯ ಎಂದು ಪ್ರತಿಪಕ್ಷದ ನಾಯಕ, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕರ್ನಾಟಕದ ಭೂಮಿಯನ್ನು ರಕ್ಷಿಸಲು ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅಶೋಕ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ, ರಷ್ಯಾ ಖಂಡನೆ, Video

ಜನಗಣತಿ 2027: ಮನೆ ಪಟ್ಟಿಗಳನ್ನು ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭ

'ಹೊಡಿತಾಳೆ.. ಬಡಿತಾಳೆ ನನ್ ಹೆಡ್ತಿ': ನಟ Dhanush ಪೊಲೀಸ್ ದೂರು! ಮದುವೆಯಾದ 9 ತಿಂಗಳಿಗೇ ಬೀದಿಗೆ ಬಂದ ಸಂಸಾರ!

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿ

SCROLL FOR NEXT