ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಪರಿಸರ ರಕ್ಷಣೆಗೆ 5 ಕೋಟಿ ಸಸಿ ನೆಡುವ ಯೋಜನೆ: ಸಿಎಂ ಸಿದ್ದರಾಮಯ್ಯ

ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ.

ಬೆಂಗಳೂರು: ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರತಿವರ್ಷ 3-5 ಕೋಟಿ ಸಸಿ ನೆಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ವಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23ನೇ ಚಿತ್ರಸಂತೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು.

ಸಾಲು ಮರದ ತಿಮ್ಮಕ್ಕನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಹಲವು ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು.

ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿ

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

ನಟ ವಿಜಯ್ ಅಭಿನಯದ Jana Nayagan ಚಿತ್ರ ಬಿಡುಗಡೆ ಮುಂದೂಡಿಕೆ, ಕಾರಣ ಸೆನ್ಸಾರ್!

ಮಲಯಾಳಂ ಕಡ್ಡಾಯ ಮಸೂದೆ: ಕಾಸರಗೋಡು ಕನ್ನಡ ಭಾಷಿಕರ ಮೇಲೆ ಪರಿಣಾಮ; ರಾಜ್ಯ ನಿಯೋಗದಿಂದ ಕೇರಳ ರಾಜ್ಯಪಾಲರ ಭೇಟಿ!

ಇನ್ನೆಷ್ಟು ದಿನ ಇರ್ತಿನೋ ಗೊತ್ತಿಲ್ಲ: ಅರಸು ದಾಖಲೆ ಮುರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

SCROLL FOR NEXT