ಡಿ.ಕೆ. ಶಿವಕುಮಾರ್ 
ರಾಜ್ಯ

ಜನಾರ್ಧನ ರೆಡ್ಡಿ ಅಮೆರಿಕಾದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು? ವಾಲ್ಮೀಕಿ ಒಂದು ಸಮುದಾಯಕ್ಕೆ ಸೇರಿದವರೇ?

ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿಯವರು ಒಂದು ಸಮುದಾಯಕ್ಕೆ ಸೇರಿದವರೇ? ಅವರು ಎಲ್ಲಾ ಸಮುದಾಯದ ಆಸ್ತಿ. ಅವರು ಬರೆದಿರುವ ರಾಮಾಯಣವನ್ನು ಎಲ್ಲರೂ ಓದುವುದಿಲ್ಲವೇ?

ಬೆಂಗಳೂರು: ಬಳ್ಳಾರಿ ಗಲಭೆ ಬಗ್ಗೆ ಎಚ್.ಎಂ.ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಳ್ಳಾರಿ ಗಲಭೆ ಕುರಿತಾಗಿ ಎಚ್.ಎಂ.ರೇವಣ್ಣ ಅವರ ಸಮಿತಿ ಭೇಟಿ ಮಾಡಿ ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ತಿಳಿಸಿದ್ದಾರೆ ಎಂದರು.

ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿಯವರು ಒಂದು ಸಮುದಾಯಕ್ಕೆ ಸೇರಿದವರೇ? ಅವರು ಎಲ್ಲಾ ಸಮುದಾಯದ ಆಸ್ತಿ. ಅವರು ಬರೆದಿರುವ ರಾಮಾಯಣವನ್ನು ಎಲ್ಲರೂ ಓದುವುದಿಲ್ಲವೇ?. ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ಧನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ" ಎಂದರು.

ಜಡ್ ಪ್ಲಸ್ ಸೆಕ್ಯುರಿಟಿ ನೀಡಿ ಎಂದು ಜನಾರ್ದನ ರೆಡ್ಡಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, "ಜಡ್ ಆದರೂ ಕೇಳಲಿ. ಇರಾನ್, ಅಮೆರಿಕಾದಿಂದಾದರೂ ಸೆಕ್ಯುರಿಟಿ ತೆಗೆದುಕೊಂಡು ಬರಲಿ.‌ ಇವರು ಯಾರನ್ನಾದರೂ ನೇಮಿಸಿಕೊಳ್ಳಲಿ. ಬೇಡ ಎಂದವರು ಯಾರು" ಎಂದು ತಿರುಗೇಟು ನೀಡಿದರು.

ರೆಡ್ಡಿ ಅವರಿಗೆ ರಕ್ಷಣೆ ನೀಡಬೇಕು ಎಂದು ಸೋಮಣ್ಣ ಅವರು ಸಹ ದನಿಗೂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರ ಪಕ್ಷದ ಕೇಡರ್ಸ್ ನೂರು ಮಂದಿಯನ್ನು ಅವರು ತಯಾರಿ ಮಾಡಿಕೊಳ್ಳಲಿ" ಎಂದರು.

ಬಳ್ಳಾರಿ ಗಲಭೆಯ ತನಿಖೆಯನ್ನು ಸಿಐಡಿ ಅಥವಾ ಎಸ್ ಐಟಿಗೆ ನೀಡುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಗೃಹ ಸಚಿವರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಯಾವ ಚರ್ಚೆಯೂ ನನಗೆ ಗೊತ್ತಿಲ್ಲ" ಎಂದರು.

ಗುಂಡು ಸತೀಶ್ ರೆಡ್ಡಿ ಅವರ ಗನ್ ಮ್ಯಾನ್ ದು ಎನ್ನುವ ವರದಿ ಬಗ್ಗೆ ಕೇಳಿದಾಗ, "ಯಾರದ್ದೇ ಆಗಿದ್ದರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವರದಿ ಬಗ್ಗೆ ನನಗೆ ಗೊತ್ತಿಲ್ಲ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel