ಎ.ಪಿ. ಸಿಂಗ್ 
ರಾಜ್ಯ

ಸನ್ನದ್ಧತೆ ಕಾಪಾಡಿಕೊಳ್ಳಲು ಏರ್ ಕ್ರ್ಯಾಫ್ಟ್ ಅಗತ್ಯಗಳ ಸಕಾಲಿಕ ಪೂರೈಕೆ ನಿರ್ಣಾಯಕ: ಎ.ಪಿ ಸಿಂಗ್

ವೇಗವಾಗಿ ಬದಲಾಗುತ್ತಿರುವ ಭದ್ರತಾ ವ್ಯವಸ್ಥೆಯಲ್ಲಿ ಭಾರತೀಯ ವಾಯಪಡೆಯನ್ನು ಸನ್ನದ್ಧವಾಗಿರಿಸಲು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಅಗತ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು.

ಬೆಂಗಳೂರು: ವಾಯುಪಡೆ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಪಾಡಿಕೊಳ್ಳಲು ಅಗತ್ಯಗಳನ್ನು ಸಕಾಲಿಕ ಪೂರೈಕೆ ಮಾಡುವುದು ನಿರ್ಣಾಯಕ ಎಂದು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಏರ್‌ಬೋರ್ನ್ ಸಿಸ್ಟಮ್ಸ್ ಕೇಂದ್ರದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ 'ಏರೋನಾಟಿಕ್ಸ್ 2047' ಉದ್ಘಾಟನಾ ಸಮಾರಂಭದಲ್ಲಿ ಎಪಿ ಸಿಂಗ್ ಅವರು ಮಾತನಾಡಿದರು.

ವೇಗವಾಗಿ ಬದಲಾಗುತ್ತಿರುವ ಭದ್ರತಾ ವ್ಯವಸ್ಥೆಯಲ್ಲಿ ಭಾರತೀಯ ವಾಯಪಡೆಯನ್ನು ಸನ್ನದ್ಧವಾಗಿರಿಸಲು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಅಗತ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು ಎಂದು ಹೇಳಿದರು.

ಇದೇ ವೇಳೆ ತೇಜಸ್‌ ಲಘು ಯುದ್ಧವಿಮಾನ ಹಾರಾಟ ಆರಂಭಿಸಿ 25 ವರ್ಷ ಪೂರ್ಣಗೊಳಿಸಿರುವುದಕ್ಕೆ ಎಡಿಎ ಅನ್ನು ಅಭಿನಂದಿಸಿದರು. ಸೇನಾ ಸಲಕರಣೆಗಳ ಸಕಾಲಿಕ ಪೂರೈಕೆಯ ಅಗತ್ಯದ ಬಗ್ಗೆ ಒತ್ತಿ ಹೇಳಿದರು.

2047ರ ವೇಳೆಗೆ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಲು ಮತ್ತು ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ದೇಶಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಮುಖ್ಯಸ್ಥ ಸಮಿರ್ ವಿ. ಕಾಮತ್‌ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ