ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ ತೇಜಸ್ವಿನಿ 
ರಾಜ್ಯ

ಪ್ರೀತ್ಸೆ.. ಪ್ರೀತ್ಸೆ..: ಭಗ್ನಪ್ರೇಮಿ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

ಬೆಂಗಳೂರಿನ ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು: ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದಿದ್ದ ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ಥ ಅಪ್ರಾಪ್ತ ಬಾಲಕಿಯನ್ನು 17 ವರ್ಷದ ತೇಜಸ್ವಿನಿ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಅಂಚೇಪಾಳ್ಯದ ಪ್ರಕೃತಿ ಲೇಔಟ್ ನಿವಾಸಿ ತೇಜಸ್ವಿನಿ (17)ಗೆ ಕಳೆದ ಕೆಲವು ದಿನಗಳಿಂದ ಯುವಕನೋರ್ವ ಪ್ರೀತಿಯ ಹೆಸರಿನಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಕಿರುಕುಳ ತಾಳಲಾರದೆ ಮನನೊಂದ ಬಾಲಕಿ, ತನ್ನ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಮಗಳ ಸಾವಿಗೆ ಅವನೇ ಕಾರಣ

ಇನ್ನು ಮಗಳ ಸಾವಿನಿಂದ ಆಕ್ರೋಶಗೊಂಡಿರುವ ಪೋಷಕರು, ಯುವಕನ ಕಿರುಕುಳವೇ ತನ್ನ ಮಗಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳ ನೀಡಿದ ಯುವಕನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

RCB ಅಭಿಮಾನಿಗಳಿಗೆ ತೀವ್ರ ನಿರಾಸೆ: ಚಿನ್ನಸ್ವಾಮಿಗಿಲ್ಲ IPL ಭಾಗ್ಯ?, ಹೊಸ ತವರು ಮೈದಾನ ಬಹುತೇಕ ಫಿಕ್ಸ್!

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಪರ್ಧೆ!

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್

SCROLL FOR NEXT