ಶರ್ಮಿಳಾ 
ರಾಜ್ಯ

ಬೆಂಗಳೂರು: ಶಾರ್ಟ್ ಸರ್ಕಿಟ್ ನಿಂದ ಬೆಂಕಿ, ಉಸಿರುಗಟ್ಟಿ ಟೆಕ್ಕಿ ಸಾವು; Accenture ಉದ್ಯೋಗಿ ದಾರುಣ ಅಂತ್ಯ

ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್​ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್​ನಲ್ಲಿ ವಾಸವಿದ್ದರು.

ಬೆಂಗಳೂರು: ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಶರ್ಮಿಳಾ (34) ಮೃತ ದುರ್ದೈವಿ. ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್​ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್​ನಲ್ಲಿ ವಾಸವಿದ್ದರು. ಮಂಗಳೂರಿನಿಂದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಜನವರಿ 3 ರಂದು ದುರಂತ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3 ರಂದು ರಾತ್ರಿ 10.30 ರ ಸುಮಾರಿಗೆ ಶರ್ಮಿಳಾ ವಾಸವಿದ್ದ ರೂಮಿ​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್​ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಮನೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದಿರೋದು ಕಂಡುಬಂದಿದೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪರೀಕ್ಷೆ ನಡೆಸಿದ್ದ ವೈದ್ಯರು ಮೃತ ಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಬೆಂಕಿ ಬಿದ್ದ ಪರಿಣಾಮ ರೂಮ್​ನಿಂದ ಹೊರ ಬರಲಾಗದೇ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯಿಂದ ರೂಮಿನಲ್ಲಿ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ. ಸ್ಥಳಕ್ಕೆ ಸೋಕೋ ಟೀಮ್, ಎಫ್‌ಎಸ್‌ಎಲ್‌ ತಂಡ ಭೇಟಿ ಪರಿಶೀಲನೆ ಮಾಡಿದೆ. ನಿಖರ ಕಾರಣ ತಿಳಿಯಲು ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT