ಜಿ ಪರಮೇಶ್ವರ 
ರಾಜ್ಯ

ಬಳ್ಳಾರಿ ಫೈರಿಂಗ್: ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿಲ್ಲ; HDK ಆರೋಪ ತಳ್ಳಿಹಾಕಿದ ಪರಮೇಶ್ವರ

ಬಳ್ಳಾರಿ ಗುಂಡಿನ ದಾಳಿ ಘಟನೆಯನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ "ವ್ಯವಸ್ಥಿತ ಪಿತೂರಿ" ನಡೆಸಿದೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದರು.

ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಲಾಗಿದೆ ಎಂಬ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಇತ್ತೀಚಿನ ಬಳ್ಳಾರಿ ಗುಂಡಿನ ದಾಳಿ ಘಟನೆಯನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ "ವ್ಯವಸ್ಥಿತ ಪಿತೂರಿ" ನಡೆಸಿದೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದರು. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.

ಇಂದು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ರಾಜಕೀಯ ನಾಯಕರು ಸರಿಯಾದ ಪರಿಶೀಲನೆ ಇಲ್ಲದೆ ಹೇಳಿಕೆಗಳನ್ನು ನೀಡಬಾರದು. ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ ನಾಯಕರುಗಳು ಮಾತನಾಡುವಾಗ ಹೇಳಿಕೆಗಳು ಸಮಾಜದಲ್ಲಿ ಏನಾಗಬಹುದು ಎಂಬುದನ್ನು ಅರಿತುಕೊಂಡು ಮಾತನಾಡಬೇಕು ಎಂದರು.

"ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಎರಡು ಬಾರಿ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಹೇಳುವವರು - ಅವರು ಅದನ್ನು ನೋಡಿದ್ದಾರೆಯೇ? ವೈದ್ಯರು ಹೇಳಿಕೆ ನೀಡಿದಾಗ, ನಾವು ಯಾರನ್ನು ನಂಬಬೇಕು? ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಲಾಗಿಲ್ಲ ಎಂಬ ವೈದ್ಯರ ಹೇಳಿಕೆಯನ್ನು ನಾನು ಒಪ್ಪುತ್ತೇನೆ" ಎಂದರು.

ನಾನು ಗೃಹ ಸಚಿವನಾಗಿ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದು, 38 ವರ್ಷಗಳ ರಾಜಕೀಯ ಅನುಭವ ಹೊಂದಿದ್ದೇನೆ. ಪಕ್ಷ ಮತ್ತು ಸರ್ಕಾರ ಎರಡರಲ್ಲೂ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದು ಹೇಳಿದರು.

ಜನವರಿ 4 ರಂದು ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡಿನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ.

ಇದೇ ವೇಳೆ ಮಾಜಿ‌ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜು ಅರಸು ಅವರ 2792 ದಿನಗಳನ್ನು ಸರಿಗಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT