ಬಸವಂತ ಕಡೋಲ್ಕರ್ 
ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಜೀವ ಉಳಿಸಿದ IPS ಅಧಿಕಾರಿ

ಇಂದು ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಮಂಗಳವಾರ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್​​​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಮೃಣಾಲ್ ಅವರು ಆಸ್ಪತ್ರೆಗೆ ಭೇಟಿ, ಬಸವಂತ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು, ಹಲ್ಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಚಾಕು ಇರಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಹಲ್ಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಮೈನಿಂಗ್ ವಿಚಾರಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಜೀವ ಉಳಿಸಿದ IPS ಅಧಿಕಾರಿ

ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಅವರು ಬಸವಂತ ಕಡೋಲ್ಕರ್​​ ಜೀವ ಉಳಿಸಿದ್ದಾರೆ. ಘಟನೆ ವೇಳೆ ರವೀಂದ್ರ ಗಡಾದಿ ಅವರು ಮನೆಗೆ ಊಟಕ್ಕೆ ಹೋಗುತ್ತಿದ್ದರು. ಗಲಾಟೆ ನೋಡುತ್ತಿದ್ದಂತೆ ಸ್ಥಳಕ್ಕೆ ಹೋಗಿ ದುಷ್ಕರ್ಮಿಗಳಿಂದ ಬಸವಂತ ಅವರ ಜೀವ ಉಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

RCB ಅಭಿಮಾನಿಗಳಿಗೆ ತೀವ್ರ ನಿರಾಸೆ: ಚಿನ್ನಸ್ವಾಮಿಗಿಲ್ಲ IPL ಭಾಗ್ಯ?, ಹೊಸ ತವರು ಮೈದಾನ ಬಹುತೇಕ ಫಿಕ್ಸ್!

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಸ್ಪರ್ಧೆ!

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್

SCROLL FOR NEXT