ಬೊಲೆರೊ ವಾಹನ ಡಿಕ್ಕಿ  
ರಾಜ್ಯ

ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ: ನಾಲ್ವರು ಸಾವು

ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಿರಣ್(25), ಅರುಣ್(32), ಗಿರಿರಾಜ್(46) ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಹನುಮಂತಪ್ಪ (32) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಒಂದೇ ಗ್ರಾಮದ ನಾಲ್ವರ ಸಾವು

ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ. ಒಂದೇ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು

ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!