ಪೊಲೀಸರಿಗೆ ಕಚ್ಚಿ ಗಾಯಗೊಳಿಸಿದ ಬಂಧಿತ ಮಹಿಳೆ 
ರಾಜ್ಯ

ಹುಬ್ಬಳ್ಳಿ: ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌; Video

ಮಹಿಳೆಯನ್ನ ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: ಹುಬ್ಬಳ್ಳಿಯಲ್ಲಿ ಪೊಲೀಸರು ತಮ್ಮ ಕಾರ್ಯಕರ್ತೆಯನ್ನು ಬಂಧಿಸಿ ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.

ಬಸ್ಸಿನಲ್ಲಿ ಪುರುಷ ಮತ್ತು ಮಹಿಳಾ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಸುತ್ತುವರೆದಿರುವ ವೀಡಿಯೊವೊಂದು ಹರಿದಾಡುತ್ತಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಮಹಿಳೆ ಟಾಪ್‌ಲೆಸ್ ಆಗಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಆದರೆ ಬಿಜೆಪಿಯ ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಮಹಿಳೆಯನ್ನ ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ.

ಆಕೆ ತನ್ನ ಬಟ್ಟೆಗಳನ್ನು ಸ್ವತಃ ತೆಗೆದು ಪೊಲೀಸರ ಮೇಲೆ ಹಲ್ಲೆ ನಡೆಸಿ, ಅವರಿಗೆ ಕಚ್ಚಿ ಗಾಯಗೊಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆ ಬಟ್ಟೆ ಬಿಚ್ಚಿದ್ದು ಮಾತ್ರವಲ್ಲದೆ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಹೊಟ್ಟೆಗೆ ಕಚ್ಚಿದ್ದಾಳೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ತಂಡ ಆಕೆಯನ್ನು ಕರೆದುಕೊಂಡು ಹೋಗಲು ಹೋದಾಗ, ಆಕೆ ಬಂಧನವನ್ನು ವಿರೋಧಿಸಿದರು , ಪೊಲೀಸರ ತಂಡ ಆಕೆಯನ್ನು ಬಲವಂತವಾಗಿ ಪೊಲೀಸ್ ವಾಹನದೊಳಗೆ ಕರೆದೊಯ್ದರು, ಪೊಲೀಸರ ವಿರುದ್ ಮಾಡಿರುವ ಆರೋಪವು ಸಂಪೂರ್ಣವಾಗಿ ಸುಳ್ಳು, ಹಾಗೂ ದುರುದ್ದೇಶದಿಂದ ಕೂಡಿದೆ. ನಾನು ಘಟನೆಗಳನ್ನು ಪರಿಶೀಲಿಸಿದ್ದೇನೆ ಎಂದು ಶಶಿಕುಮಾರ್ ವಿವರಿಸಿದ್ದಾರೆ.

ಜನವರಿ 1 ರಿಂದ 5 ರವರೆಗಿನ ಘಟನೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ತಿಳಿಸಿರುವುದಾಗಿ ಹೇಳಿದರು. ಮಹಿಳೆಯ ವಿರುದ್ಧ ಸುಮಾರು ಒಂಬತ್ತು ಪ್ರಕರಣಗಳು ಬಾಕಿ ಇವೆ ಎಂದು ಶಶಿಕುಮಾರ್ ಹೇಳಿದರು. ಮಹಿಳೆ ಇಬ್ಬರು ಪೊಲೀಸರ ಹೊಟ್ಟೆಗೆ ಕಚ್ಚಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡರು, ಇತರ ಇಬ್ಬರು ಪುರುಷ ಸಿಬ್ಬಂದಿಗೂ ಕೆಲವು ಗಾಯಗಳಾಗಿವೆ.

ಪುರುಷ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ದೂರು ನೀಡಿಲ್ಲ, ಆದರೆ ಮಹಿಳಾ ಅಧಿಕಾರಿಗಳು, ಅವರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು. ಬೂತ್‌ ಅಧಿಕಾರಿಗಳೊಂದಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ ನಮ್ಮ ವೋಟ್‌ ಡಿಲೀಟ್‌ ಮಾಡಿಸಿದ್ದಾರೆ ಎಂದು ಗಲಾಟೆ ಮಾಡಿದ್ದರು. ಹಾಗಾಗಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತಿಕ್ಕಾಟ ನಡೆಯುತ್ತಲೇ ಇತ್ತು. ಇದೇ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರಂತೆ. ಇದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೂ ಪ್ರತಿದೂರು ದಾಖಲಾಗಿತ್ತು. ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್‌ ಸೆಕ್ಷನ್‌ 307 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನ ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ-Video

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

"ನನಗೆ ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳೂ ಬೇಕಿಲ್ಲ"- ಗ್ರೀನ್ ಲ್ಯಾಂಡ್ ವಶದ ಬಗ್ಗೆ ಟ್ರಂಪ್ ಸುಳಿವು

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

SCROLL FOR NEXT