ಹೊತ್ತಿ ಉರಿದ ಕಾರು 
ರಾಜ್ಯ

ಹೊನ್ನಾವರ-ಗೇರುಸೊಪ್ಪ ಬಳಿ ಕಾರು ಪಲ್ಟಿ: ಇಬ್ಬರು ಸಜೀವ ದಹನ; ಗುರುತು ಹಚ್ಚಲು ಪೊಲೀಸರ ಹರಸಾಹಸ

ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವಂತೆ ಕಂಡುಬಂದಿದೆ. ಕಾರಿನ ನಂಬರ್ ಪ್ಲೇಟ್ ಕೂಡಾ ಬೆಂಕಿಯಲ್ಲಿ ಸುಟ್ಟು ಕಾಣದಾಗಿದೆ.

ಕಾರವಾರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ.

ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವಂತೆ ಕಂಡುಬಂದಿದೆ. ಕಾರಿನ ನಂಬರ್ ಪ್ಲೇಟ್ ಕೂಡಾ ಬೆಂಕಿಯಲ್ಲಿ ಸುಟ್ಟು ಕಾಣದಾಗಿದೆ. ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆ ಕಾರ್ಯಾಚರಣೆಗೆ ಪೊಲೀಸರು ಇಳಿದಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಹೊರಬರಲಾಗದೇ ಸಜೀವ ದಹನವಾಗಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಹಾಗೂ ಮೃತರ ಗುರುತು ಪತ್ತೆಯಾಗದಷ್ಟು ಸುಟ್ಟು ಕರಕಲಾಗಿದೆ.

ಕಾರಿನ ನಂಬರ್ ಪ್ಲೇಟ್ ಸಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ, ವಾಹನದ ಮಾಲೀಕತ್ವ ಹಾಗೂ ಮೃತರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್