ಸಾಂದರ್ಭಿಕ ಚಿತ್ರ 
ರಾಜ್ಯ

EVM ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌.

ಬೆಂಗಳೂರು: ರಾಜ್ಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌ ಎಂದು ಹೇಳಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದಲ್ಲಿ ಚುನಾವಣಾ ಆಯೋಗ ನಡೆಸಿದ ಸಮೀಕ್ಷೆಯಲ್ಲಿ ಶೇ. 85 ರಷ್ಟು ಮಂದಿ ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

ರಂಜಾನ್, ಹೋಳಿ ಹಬ್ಬ: ಶಾಂತಿ ಕದಡಿದರೆ ಕಠಿಣ ಕ್ರಮ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ

'ನಾಚಿಕೆ ಏನೆಂದು ನಿಮಗೆ ನಾನು ಹೇಳುತ್ತೇನೆ, ಕೇಳಿಸಿಕೊಳ್ಳಿ ಮೋದಿಯವರೇ', ಎಪ್ಸ್ಟೀನ್ ಫೈಲ್, India-US trade ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ-Video

SCROLL FOR NEXT