ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

Grihalakshmi: ಶೀಘ್ರದಲ್ಲೇ ಫೆಬ್ರವರಿ-ಮಾರ್ಚ್ ಬಾಕಿ ಪಾವತಿ, BPL ಕಾರ್ಡ್ ರದ್ದಾಗಿದ್ದರೆ ಹಣ ಕೂಡ ರದ್ದು- ಲಕ್ಷ್ಮಿ ಹೆಬ್ಬಾಳ್ಕರ್

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್ ರದ್ದಾಗಿರುವವರಿಗೆ ಹಣ ವರ್ಗಾವಣೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ.

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಪಿಎಲ್ ಕಾರ್ಡ್ ರದ್ದಾಗಿರುವವರಿಗೆ ಹಣ ವರ್ಗಾವಣೆಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, 'ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruha Lakshmi) ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು.

ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು.

BPL ಕಾರ್ಡ್ ರದ್ದಾಗಿದ್ದರೆ ಹಣ ಕೂಡ ರದ್ದು

ಇದೇ ವೇಳೆ ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​ ರದ್ದುಗೊಳಿಸಲಾಗಿದ್ದು, ಇದೀಗ ಅಂತವರ ಗೃಹಲಕ್ಷ್ಮೀ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ.

ಅನರ್ಹ ರೇಷನ್‌ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ‌ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ, ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಸಹಕಾರ ಸಂಘ

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಕಂಡೀಷನ್‌ಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು. ಜೊತೆಗೆ ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಎಂದು ಹೇಳಿದರು.

ಅಕ್ಕಪಡೆ

ನಮ್ಮ ಇಲಾಖೆ ಹಾಗೂ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕಪಡೆ ಆರಂಭಿಸಲಾಗಿದೆ. ಬಹಳಷ್ಟು ಮಹತ್ವಾಕಾಂಕ್ಷೆ ಇಟ್ಟುಕೊಂಡು ಅಕ್ಕಪಡೆ ಆರಂಭಿಸಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಿಸಿದ್ದು, ಅವರಿಗೆ ತರಬೇತಿ ನೀಡಲಾಗುತ್ತಿದೆ. ಬಸ್‌ ಸ್ಟಾಪ್‌, ದೇವಸ್ಥಾನ, ಮಾಲ್‌, ಪಾರ್ಕ್‌ಗಳಲ್ಲಿ ಅಕ್ಕಪಡೆ ಗಸ್ತು ತಿರುಗಲಿದೆ ಎಂದು ತಿಳಿಸಿದರು.

ಅಕ್ಕಪಡೆ ಸ್ಕೂಲ್‌, ಕಾಲೇಜುಗಳಿಗೂ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದು, ದೂರು ಕೊಡಲು ಅಂಜುವ ಹೆಣ್ಣುಮಕ್ಕಳ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಕ್ಕಪಡೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಗೊಳಗಾದ ಮಹಿಳೆಯರು, ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಹೆಣ್ಣುಮಕ್ಕಳು ಸಹ ದೂರು ನೀಡಬಹುದು ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಯಾರೇ ತಪ್ಪು ಮಾಡಿರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂಬುದೇ ನನ್ನ ಕೋರಿಕೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT