ತುಮಕೂರು: ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದೆ.
ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಲ್ವರು ಅಯ್ಯಪ್ಪ ಮಾಲಾಧಾರಿಗಳ ಸಾವು
ಇತ್ತೀಚಿಗೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿರುವುದು ಭಕ್ತರನ್ನು ಬೆಚ್ಚಿಬೀಳಿಸಿದೆ. ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಮೃತರೆಲ್ಲಾ ಯಲಬುರ್ಗಾ ಮೂಲದವರು
ಮೃತರೆಲ್ಲಾ ಯಲಬುರ್ಗಾ ಮೂಲದವರಾಗಿದ್ದಾರೆ. ಅಯ್ಯಪ್ಪ ಮಾಲೆ ಧರಿಸಿದ್ದವರು ಪ್ರವಾಸಕ್ಕೆ ತೆರಳಿದ್ದ ಸಾಧ್ಯತೆ ಇದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.