ರಾಜ್ಯ

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ:​​ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ.

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ.

ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಣಯಕೈಗೊಂಡಿದೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದೆ ಎಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣ: 25 ಆರೋಪಿಗಳಿಗೆ ಜಾಮೀನು

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ತನ್ನ ಬಳಿಯಿದ್ದ ಗನ್‌ನಿಂದ 12 ಎಂಎಂ ಬುಲೆಟ್ ಫೈರ್ ಮಾಡಿದ್ದನು. ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಅಂದು ಗುಂಡೇಟು ಬಿದ್ದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬಾತ ಮೃತಪಟ್ಟಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT