ಕರ್ನಾಟಕ ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ) 
ರಾಜ್ಯ

VB-G RAM G ಕಾಯ್ದೆ: ಕೇಂದ್ರದ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ ಮುಂದು..!

ಜನರ ನ್ಯಾಯಾಲಯಕ್ಕೂ ‘ವಿಬಿ ಜಿ ರಾಮ್ ಜಿ’ ಕಾಯ್ದೆಯನ್ನು ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ. ಸಂವಿಧಾನದ 73ನೆ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ.

ಬೆಂಗಳೂರು: ಜಿ ರಾಮ್ ಜಿ ಕಾಯ್ದೆಗೆ (VB–G RAM G Act) ರಾಜ್ಯ ಕಾಂಗ್ರೆಸ್ ಸರ್ಕಾರ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ.

ಕೇಂದ್ರದ ವಿರುದ್ಧ ಕಾಂಗ್ರೆಸ್ 'ಮನ್ರೇಗಾ ಬಚಾವೊ ಸಂಗ್ರಾಮ್' ಆಂದೋಲನವನ್ನು ಪ್ರಾರಂಭಿಸಲು ಹೊರಟಿದ್ದು, ಇದರ ಬೆನ್ನಲ್ಲೇ ಈ ನಿರ್ಧಾರವು ಮಹತ್ವವನ್ನು ಪಡೆದುಕೊಂಡಿದೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಹಾಗೂ ಜನತಾ ನ್ಯಾಯಾಲಯದಲ್ಲಿ ಹೋರಾಟ ನಡೆಸಲು ನಿರ್ಧರಿಸಿದೆ. ಇದೇ ವೇಳೆ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸಲು ವಿಶೇಷ ಗ್ರಾಮ ಸಭೆಗಳನ್ನು ನಡೆಸಲೂ ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.

ಮನ್ರೇಗಾ ಕಾಯ್ದೆಯನ್ನು ರದ್ದುಪಡಿಸಿರುವುದು ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಅನುಷ್ಠಾನಗೊಳಿಸುವುದರಿಂದ ರಾಜ್ಯ ಮತ್ತು ರಾಜ್ಯದ ಜನತೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ, ಸಾಂವಿಧಾನಿಕ ಮತ್ತು ಕಾನೂನು ಪರಿಣಾಮಗಳ ಕುರಿತು, ವಿವಿಧ ನಿಬಂಧನೆಗಳ ಕುರಿತು ಅಡ್ವೊಕೇಟ್ ಜನರಲ್ ಅವರೊಂದಿಗೆ ವಿವರವಾಗಿ ಚರ್ಚಿಸಿ, ಈ ಕಾಯ್ದೆಯನ್ನು ಅಂಗೀಕರಿಸದಿರಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಹೇಳಿದರು.

ಜನರ ನ್ಯಾಯಾಲಯಕ್ಕೂ ‘ವಿಬಿ ಜಿ ರಾಮ್ ಜಿ’ ಕಾಯ್ದೆಯನ್ನು ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ. ಸಂವಿಧಾನದ 73ನೆ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರವು ಮನ್ರೇಗಾ ಕಾಯ್ದೆಯನ್ನು ವಾಪಸ್ಸು ಪಡೆಯುವ ಮೂಲಕ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡಿದೆ. ಮನ್ರೇಗಾ ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ. ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರಕಾರ ತೋರಿಸಿಲ್ಲ. ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ ಎಂದು ಆರೋಪಿಸಿದರು.

ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ, ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣ ಎಲ್ಲಿದೆ. ಶೇ.40ರಷ್ಟು ಅನುದಾನವನ್ನು ರಾಜ್ಯ ಸರಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೆ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT