ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ತಾಯಿ, ಇಬ್ಬರು ಮಕ್ಕಳು ಸಾವು

ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಯಾದ ರುಕ್ಮಿಣಿ ಬಾಯಿ ನಾಯಕ್(36), ಅವರ ಮಗಳು ಶಿವಾನಿ ನಾಯಕ್(6) ಮತ್ತು 4 ವರ್ಷದ ಮಗ ರೋಷನ್ ನಾಯಕ್ ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮದ ಬಳಿ ಶನಿವಾರ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಯಾದ ರುಕ್ಮಿಣಿ ಬಾಯಿ ನಾಯಕ್(36), ಅವರ ಮಗಳು ಶಿವಾನಿ ನಾಯಕ್(6) ಮತ್ತು 4 ವರ್ಷದ ಮಗ ರೋಷನ್ ನಾಯಕ್ ಎಂದು ಗುರುತಿಸಲಾಗಿದೆ.

ಸದ್ಯ ಸ್ಥಳಕ್ಕೆ ಅಮೀನ್​ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!