ಡಿಕೆಶಿ ತಿನ್ನಿಸಿದ ಸ್ವೀಟನ್ನು ಬಾಯಿಂದ ಎಸೆದ ಸಿದ್ದರಾಮಯ್ಯ, ಯಾಕೆ ಹೀಗೆ ಮಾಡಿದರು ಎಂದು ಕೇಳುತ್ತಿದ್ದಾರೆ ನೆಟ್ಟಿಗರು; Video
ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿಜಯಪುರ: ವಿಜಯಪುರದಲ್ಲಿ ನಿನ್ನೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಗೆ ಹಾಕಿದಂತೆ ಮಾಡಿ ನಂತರ ಹಿಂದೆ ಕೆಳಗೆ ಎಸೆದಿದ್ದು ವಿಡಿಯೊ ವೈರಲ್ ಆಗಿದೆ.
ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡುವನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು.
ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದು ಅವರ ವರ್ತನೆಗೆ ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.