ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿಜಯಪುರದಲ್ಲಿ ಶೀಘ್ರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
Manjula VN
Updated On : 10 Jan 2026, 9:10 am

ವಿಜಯಪುರ: ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿೇ ಮುಖ್ಯಮಂತ್ರಿಗಳು ಮಾತನಾಡಿದರು.

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳು ಎಂದು ಹೇಳಿದರು.

Advertisement

Advertisement

ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ.

Also Read

ಡಿಕೆಶಿ ತಿನ್ನಿಸಿದ ಸ್ವೀಟನ್ನು ಬಾಯಿಂದ ಎಸೆದ ಸಿದ್ದರಾಮಯ್ಯ, ಯಾಕೆ ಹೀಗೆ ಮಾಡಿದರು ಎಂದು ಕೇಳುತ್ತಿದ್ದಾರೆ ನೆಟ್ಟಿಗರು; Video

ವಿಜಯಪುರ ಜಿಲ್ಲೆಯಲ್ಲಿ ರೂ.800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ರೂ.82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ರೂ.730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್‌ನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ ರೂ.160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದಾರೆ, ಅದನ್ನು ನೆರವೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ಶಿವಾನಂದ್ ಪಾಟೀಲ್, ಬಿ.ಎಸ್. ಸುರೇಶ್, ರಾಮಲಿಂಗಾ ರೆಡ್ಡಿ, ಲಕ್ಷ್ಮಿ ಹಬ್ಬಾಳ್ಕರ್ ಸೇರಿದಂತೆ ಇತರ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement