ಹೆಚ್ ಡಿ ಕುಮಾರಸ್ವಾಮಿ  
ರಾಜ್ಯ

VB-G RAM G ಕಾಯ್ದೆಯಡಿ ರಾಜ್ಯಗಳಿಗೆ ಹೆಚ್ಚುವರಿ ಹಣ ಸಿಗುತ್ತದೆ, ಕಾಂಗ್ರೆಸ್ ಆರೋಪ ಸುಳ್ಳು: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ನಡೆಸಿದ ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹೊಸ ಕಾನೂನು ಉದ್ಯೋಗ ಯೋಜನೆಯ ಆರ್ಥಿಕ ಹೊರೆಯನ್ನು ರಾಜ್ಯಗಳಿಗೆ ವರ್ಗಾಯಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.

ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬದಲಿಗೆ ಬಂದಿರುವ ವಿಕಸಿತ ಭಾರತ -ಗ್ಯಾರಂಟಿ ರೋಜ್ ಗಾರ್ ಮತ್ತು ಅಜೀವಿಕಾ ಮಿಷನ್ (Gramin) ಅಥವಾ VB-G RAM G ಕಾಯ್ದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್ ಡಿ ಕುಮಾರಸ್ವಾಮಿ, ಹೊಸ ಕಾನೂನು ರಾಜ್ಯಗಳಿಗೆ 17,000 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಹಣವನ್ನು ಪಡೆಯಲು ಕಾರಣವಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ನಡೆಸಿದ ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹೊಸ ಕಾನೂನು ಉದ್ಯೋಗ ಯೋಜನೆಯ ಆರ್ಥಿಕ ಹೊರೆಯನ್ನು ರಾಜ್ಯಗಳಿಗೆ ವರ್ಗಾಯಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿಎನ್‌ಆರ್‌ಇಜಿಎಯ ದೋಷಗಳನ್ನು ಸರಿಪಡಿಸಿದ್ದಾರೆ. ಎಂಜಿಎನ್‌ಆರ್‌ಇಜಿಎ ಅನುಷ್ಠಾನವು ವರ್ಷಗಳ ಕಾಲ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಕಾರಣವಾಯಿತು. ಹೊಸ ಶಾಸನವು ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ ಎಂದರು.

ಎಲ್ಲಾ ವಿಷಯಗಳಲ್ಲಿ ಕೇಂದ್ರದ ವಿರುದ್ಧ ಘರ್ಷಣೆಯ ನಿಲುವನ್ನು ತೆಗೆದುಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ, ಈ ವಿರೋಧ ಮನೋಭಾವದಿಂದಾಗಿ ರಾಜ್ಯವು ನಷ್ಟವನ್ನು ಅನುಭವಿಸುತ್ತಿದೆ. ಕೇಂದ್ರದೊಂದಿಗಿನ ರಾಜ್ಯ ಸರ್ಕಾರದ ಸಂಬಂಧಗಳನ್ನು ಕೆಲವು ಸಾಮಾನ್ಯ ಜ್ಞಾನದಿಂದ ನಿರ್ದೇಶಿಸಬೇಕು ಎಂದರು.

VB-G RAM G ಕಾಯ್ದೆಯ ಸುತ್ತ ಕಾಂಗ್ರೆಸ್ ಸುಳ್ಳು ಕಥೆ ಹೆಣೆದಿದೆ. ರಾಜ್ಯ ಮತ್ತು ಪಂಚಾಯತ್‌ಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಸತ್ಯವಲ್ಲ ಎಂದರು. ತಪ್ಪುಗಳನ್ನು ಸರಿಪಡಿಸುವಾಗ ಕಾಂಗ್ರೆಸ್ ನಾಯಕರು ತಪ್ಪು ಹುಡುಕುತ್ತಿರುವುದು ಅಸಂಬದ್ಧ ಎಂದರು.

ಉದ್ಯೋಗ ಯೋಜನೆಗೆ ರಾಜ್ಯಗಳು 40 ಶೇಕಡಾ ವೆಚ್ಚವನ್ನು ಭರಿಸಬೇಕೆಂಬ ಹೊಸ ಕಾನೂನಿನ ಷರತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಗೆ ನೈತಿಕ ಹಕ್ಕು ಇಲ್ಲ

ರಾಜ್ಯಗಳು ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು. ಅವರಿಗೆ ಹೆಚ್ಚುವರಿಯಾಗಿ 17,000 ಕೋಟಿ ರೂ.ಗಳು ಸಿಗುತ್ತವೆ. ಎಲ್ಲವನ್ನೂ ಗ್ರಾಮ ಪಂಚಾಯತ್‌ಗಳ ಮೂಲಕ ರವಾನಿಸಲಾಗುತ್ತದೆ ಎಂದರು. ಮೋದಿಯವರು ಮಹಾತ್ಮ ಗಾಂಧಿಯನ್ನು ಅವಮಾನಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಎಲ್ಲದಕ್ಕೂ ನೆಹರು ಕುಟುಂಬದ ಸದಸ್ಯರ ಹೆಸರಿಟ್ಟು ಗಾಂಧೀಜಿಯವರಿಗೆ ದ್ರೋಹ ಬಗೆದಿತು. ಗಾಂಧಿಯ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಅಧಿಕಾರವಿಲ್ಲ ಎಂದರು. ಹಳೆಯ ವ್ಯವಸ್ಥೆಯಡಿಯಲ್ಲಿ, ನಕಲಿ ರಶೀದಿಗಳನ್ನು ತಯಾರಿಸಿ ಹಣವನ್ನು ಲೂಟಿ ಮಾಡಲಾಗುತ್ತಿತ್ತು ಎಂದರು.

ಹಳೆಯ ಕಾನೂನಿನಲ್ಲಿನ ನ್ಯೂನತೆಗಳನ್ನು ಸರಿಪಡಿಸಲಾಗಿದೆ

ಹಳೆಯ ಕಾನೂನಿನಲ್ಲಿದ್ದ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಮತ್ತು ಹೊಸ ರಚನೆಯನ್ನು ಪರಿಚಯಿಸಲಾಗಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಹಿರಂಗ ಚರ್ಚೆಗೆ ಸವಾಲೆಸೆದಿದ್ದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಾವು ಓಡಿಹೋಗುತ್ತಿಲ್ಲ, ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT