ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಾಯ

ಹೊಸಕೆರೆಹಳ್ಳಿ ಟೋಲ್ ಬದಿಯಿಂದ ನೆಲಮಂಗಲ ಕಡೆಗೆ ದೇವರಾಜ್ ಅವರು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೆಳಗಿನ ಜಾವ 4.20 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಅಪಘಾತ
Manjula VN
Updated On : 12 Jan 2026, 11:55 am

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನೈಸ್ ರಸ್ತೆಯ ವರಹಸಂದ್ರ ಜಂಕ್ಷನ್ ಸಮೀಪ (ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿ) ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ನಿವಾಸಿಗಳಾದ ದೇವರಾಜ್ (32 ಹಾಗೂ ಅಶೋಕ್ (23) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಶ್ರೀನಿವಾಸ್, ಮದನ್ ಮತ್ತು ಮಹಾಂತೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೊಸಕೆರೆಹಳ್ಳಿ ಟೋಲ್ ಬದಿಯಿಂದ ನೆಲಮಂಗಲ ಕಡೆಗೆ ದೇವರಾಜ್ ಅವರು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೆಳಗಿನ ಜಾವ 4.20 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Advertisement

Advertisement

Also Read

ತುಮಕೂರು: ಅಪಘಾತ, ಯಲಬುರ್ಗಾ ಮೂಲದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು; Video

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement