ಜಲಿಯಾ ಝಲ್ವಾಂಗೊ 
ರಾಜ್ಯ

ಮಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ MDMA ಡ್ರಗ್ಸ್ ಜಪ್ತಿ; ಉಗಾಂಡಾ ಮಹಿಳೆ ಬಂಧನ

ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ.

ಮಂಗಳೂರು: ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್‌ಗಳ ಜಾಲಕ್ಕೆ ಝಲ್ವಾಂಗೊ ಡ್ರಗ್ಸ್ ಪೂರೈಕೆ ಮಾಡುತ್ತಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಮುಲ್ಕಿ ಮತ್ತು ಸುರತ್ಕಲ್ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರು ಸ್ಥಳೀಯ ಡ್ರಗ್ಸ್ ವಿತರಕರನ್ನು ಬಂಧಿಸಿದ ನಂತರ ಪ್ರಕರಣದ ತನಿಖೆ ವೇಗ ಪಡೆದುಕೊಂಡಿತು. ಆ ಶಂಕಿತರಿಂದ 900 ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ತನಿಖಾಧಿಕಾರಿಗಳು ಬೆಂಗಳೂರಿನ ಝಲ್ವಾಂಗೊ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಈ ದಂಧೆಯಲ್ಲಿ ಭಾಗಿಯಾಗಿರುವ ಆರು ಮಂದಿ ವ್ಯಾಪಾರಿಗಳಾದ ಬೈಂದೂರಿನ ಮೊಹಮ್ಮದ್ ಶಿಯಾಬ್ (22), ಉಳ್ಳಾಲದ ಮೊಹಮ್ಮದ್ ನೌಶಾದ್ (29), ಮಂಗಳೂರಿನ ಇಮ್ರಾನ್ (27), ಬಂಟ್ವಾಳದ ನಿಸಾರ್ ಅಹ್ಮದ್ (36), ಕಾಪುವಿನ ಮೊಹಮ್ಮದ್ ಇಕ್ಬಾಲ್ (30) ಮತ್ತು ಪಡುಬಿದ್ರೆಯ ಶೆಹರಾಜ್ ಶಾರುಕ್ (25) ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ