ಪ್ರಭಾ ಮಲ್ಲಿಕಾರ್ಜುನ್‌ 
ರಾಜ್ಯ

'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನೆ

ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

ದಾವಣಗೆರೆ: ಮನ್ರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

ಮನ್ರೇಗಾ ಯೋಜನೆಯ ಸ್ವರೂಪ ಬದಲಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಹೋರಾಟ ಕೈಗೆತ್ತಿಕೊಂಡಿದೆ. ಪಕ್ಷದ ಎಲ್ಲ ಕಾರ್ಯಕರ್ತರು, ಮನರೇಗಾ ಕಾರ್ಮಿಕರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಪ್ರದೇಶದ ಬಡವರಿಗೆ ಕೂಲಿ ನೀಡಿ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಒತ್ತು ನೀಡಿತ್ತು. ಕೇಂದ್ರ ಮತ್ತು ರಾಜ್ಯದ ಅನುದಾನದ ಪಾಲನ್ನು 60:40ಕ್ಕೆ ಬದಲಾವಣೆ ಮಾಡಿರುವುದು ಕೂಡ ಆಕ್ಷೇಪಾರ್ಹ. ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಈ ಹುನ್ನಾರವನ್ನು ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಷ್ಟೊಂದು ಪ್ರೀತಿ ಇದ್ದರೆ, ನಿಮ್ಮ ಮನೆಗೇಕೆ ಕರೆದೊಯ್ಯಬಾರದು?; ಶ್ವಾನ ಪ್ರಿಯರಿಗೆ ಸುಪ್ರೀಂ ಕೋರ್ಟ್ ಚಾಟಿ

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

ಟೇಕಾಫ್​ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರಿ ನೌಕರರ ತನಿಖೆಗೆ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ ನಿಂದ ವಿಭಿನ್ನ ತೀರ್ಪು

SCROLL FOR NEXT