ಡಿ.ಕೆ ಶಿವಕುಮಾರ್ 
ರಾಜ್ಯ

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಚುನಾವಣೆ; ನೇರ ಹಣಾಹಣಿಗೆ ಬಿಜೆಪಿ-ಜೆಡಿಎಸ್ ಒಂದಾಗಲಿ: ಡಿ.ಕೆ ಶಿವಕುಮಾರ್

ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ.

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದು ತಿಳಿಸಿದರು.

ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ಇದನ್ನು ಪರಿಶೀಲಿಸಿ ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು . ನಾವು ಯಾವುದೇ ಕಾಲಾವಕಾಶ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಚುನಾವಣೆ ನಿಮ್ಮ ಪಾಲಿಗೆ ಎಷ್ಟು ಸವಾಲಿನದ್ದಾಗಿದೆ ಎಂದು ಕೇಳಿದಾಗ, “ಏನು ಸವಾಲಿದೆ? ಚುನಾವಣೆ ನಡೆಸುವುದು ನನ್ನ ಕರ್ತವ್ಯ. ಕಾರ್ಯಕರ್ತರಿಗೆ ಅಧಿಕಾರ ಕೊಡುವು, ಹೊಸ ನಾಯಕರನ್ನು ತಯಾರು ಮಾಡುತ್ತಿದ್ದೇವೆ. ನಾವು ಮಾಡುತ್ತಿರುವ ಕೆಲಸಕ್ಕೆ ಜನ ಬೆಂಬಲ ನೀಡುವ ವಿಶ್ವಾಸವಿದೆ. ನಾವು ಐದೂ ಪಾಲಿಕೆಗಳಲ್ಲೂ ಗೆಲ್ಲುತ್ತೇವೆ ಎಂದರು.

ನೇರ ಹಣಾಹಣಿಗೆ ಬಿಜೆಪಿ- ಜೆಡಿಎಸ್ ಒಂದಾಗಬೇಕು

ಬಿಜೆಪಿ ಹಾಗೂ ಜೆಡಿಎಸ್ ಫ್ರೆಂಡ್ಲಿ ಫೈಟ್ ವಿಚಾರವಾಗಿ ಕೇಳಿದಾಗ, “ಅವರು ಏನಾದರೂ ಮಾಡಿಕೊಳ್ಳಲಿ. ಜತೆಯಾಗಿಯಾದರೂ ಚುನಾವಣೆ ಮಾಡಲಿ, ಬೇರೆಯಾಗಿ ಬೇಕಾದರೂ ಮಾಡಲಿ. ಅವರು ಸಂಸತ್ ಚುನಾವಣೆಯಲ್ಲಿ ಒಟ್ಟಿಗೆ ಚುನಾವಣೆ ಮಾಡಿದಂತೆ ವಿಧಾನಸಭೆ ಹಾಗೂ ಪಾಲಿಕೆ ಚುನಾವಣೆಯನ್ನು ಮಾಡಿದರೆ ನೇರ ಹಣಾಹಣಿ ಇರುತ್ತದೆ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT