ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಶರ್ಬಾನು ಖತನ್ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯನ್ನ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಸರ್ಬಾನು ಖಾತುನ್ ಎಂದು ಗುರ್ತಿಸಲಾಗಿದೆ. ಸದ್ಯ ಮಹಿಳೆಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.