ಸಿಎಂ ಸಿದ್ದರಾಮಯ್ಯ 
ರಾಜ್ಯ

Bengaluru Habba-2026: ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು - ಸಿಎಂ

ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ.

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ. ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜಿಸಿದ್ದ "ಬೆಂಗಳೂರು ಹಬ್ಬ 2026 ಅನ್ನು ಉದ್ಘಾಟಿಸಿ, ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ. ಎಲ್ಲ ಊರುಗಳಲ್ಲಿ ಹಮ್ಮಿಕೊಳ್ಳುವ ಜಾತ್ರೆ, ಉತ್ಸವಗಳು ಜಾತಿ, ಧರ್ಮಗಳನ್ನು ಮರೆತು ಮನುಷ್ಯರಾಗಬೇಕು ಎನ್ನುವ ಸಂದೇಶವನ್ನು ಸಾರುತ್ತದೆ. ಮನುಷ್ಯರು ಪರಸ್ಪರ ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಯಾವುದೇ ಧರ್ಮವು ದ್ವೇಷಿಸಲು ಹೇಳುವುದಿಲ್ಲ ಎಂದು ಹೇಳಿದರು.

ಕನ್ನಡ ನಾಡಿನಲ್ಲಿ ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಅನೇಕರು ಬಾಳಿ ಹೋಗಿದ್ದಾರೆ. ಇವರೆಲ್ಲರೂ ನಾವೆಲ್ಲ ಮನುಷ್ಯರೇ ಎಂದು ಸಾರಿ ಸಾರಿ ಹೇಳಿದವರು. ಬಸವಣ್ಣ ಜಾತಿ, ಧರ್ಮ, ವರ್ಗ, ಕಂದಾಚಾರ, ಮೌಢ್ಯಗಳು ತೊಲಗಬೇಕು ಎಂದು ಕರೆ ನೀಡಿದ್ದರು. ಹುಟ್ಟು ಮತ್ತು ಸಾವು ಇವೆರಡರ ಮಧ್ಯೆ ನಾವೇನು ಮಾಡುತ್ತೇವೆ ಎನ್ನುವುದು ಮುಖ್ಯ. ಏನು ಸಾಧಿಸಿದೆವು, ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ. ಬೇರೆಯವರು ಅನುಸರಿಸುವ ರೀತಿಯಲ್ಲಿ ನಮ್ಮ ಹೆಜ್ಜೆ ಗುರುತುಗಳು ಇರಬೇಕೇ ಹೊರತು, ಅದನ್ನು ವಿರೋಧಿಸುವಂತಿರಬಾರದು ಎಂದು ತಿಳಿಸಿದರು.

ಭವ್ಯವಾದ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು. ನಾವೆಲ್ಲರೂ ಒಂದೇ ಎಂದು ಬಾಳಬೇಕಿರುವುದು ಅವಶ್ಯ. ಪದ್ಮಿನಿ ರವಿ ಹಾಗೂ ನಂದಿನಿ ಆಳ್ವ ಅವರು ಪ್ರಾರಂಭಿಸಿದ ಬೆಂಗಳೂರು ಹಬ್ಬವನ್ನು ರವಿಚಂದರ್ ಮತ್ತು ಪ್ರಶಾಂತ್ ಪ್ರಕಾಶ್ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ.

ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ. ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡತನವನ್ನು ಬೆಳೆಸೋಣ. ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ಎಂದು ಹಾರೈಸುತ್ತೇನೆ. ಬೆಂಗಳೂರಿನಲ್ಲಿ 1.40 ಕೋಟಿ ಜನ ನೆಲೆಸಿದ್ದಾರೆ. ನಾವೆಲ್ಲರೂ ಒಂದಾಗಿ ಬಾಳೋಣ, ಮನುಷ್ಯರಾಗೋಣ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದೋರ್: ಕಲುಷಿತ ನೀರು ಸೇವನೆಯಿಂದ ಸಾವು, ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ! Video

ಬೆಂಗಳೂರಿನಲ್ಲಿ 'ಬಹು ಅಂಗಾಂಗ ಕಸಿ' ಆಸ್ಪತ್ರೆ: ಐದು ವರ್ಷಗಳಲ್ಲಿ 4,000 ಕೋಟಿ ರೂ. ವೆಚ್ಚದ ಗುರಿ- ಸಿಎಂ ಸಿದ್ದರಾಮಯ್ಯ

'ಫೈರಿಂಗ್ ಘಟನೆ' ಸಿಬಿಐ ತನಿಖೆಗೆ ಆಗ್ರಹ: ಬಳ್ಳಾರಿಯಲ್ಲಿ ಬಿಜೆಪಿ ಬಲಪ್ರದರ್ಶನ, ಬೃಹತ್ ಪ್ರತಿಭಟನೆ!

ದರ ನಿಗದಿಯಲ್ಲಿನ ವೈಪರೀತ್ಯಗಳಿಂದಾಗಿ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ: ಸಂಸದ ತೇಜಸ್ವಿ ಸೂರ್ಯ

ದೆಹಲಿಯಲ್ಲಿ ಖರ್ಗೆ- ಡಿಕೆಶಿ ಭೇಟಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

SCROLL FOR NEXT