ಸಿದ್ದರಾಮಯ್ಯ 
ರಾಜ್ಯ

ಮಹಾರಾಷ್ಟ್ರ ಪೊಲೀಸ್ ಮೈಸೂರಿನ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ದೀರಿ: ಕರ್ನಾಟಕ ಪೊಲೀಸರಿಗೆ ಸಿದ್ದರಾಮಯ್ಯ ಪ್ರಶ್ನೆ; Video

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ.

ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಕಾನೂನು ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ.

ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ. ಕೊಲೆ, ಸುಲಿಗೆ, ಢಕಾಯಿತಿ, ದರೋಡೆ ಪ್ರಕರಣಗಳು ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಬೇಕು. ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ.

ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ ಪ್ರಕರಣಗಳು, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳನ್ನು ಪೊಲೀಸರು ಮುಂಜಾಗರೂಕತೆ ಮೂಲಕ ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಯಾದ ಮುಂಜಾಗರೂಕತೆ ಕೈಗೊಂಡಿದ್ದರೆ, ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿತ್ತು. ಜೈಲುಗಳ ಅವ್ಯವಸ್ಥೆ ಪ್ರಕರಣಗಳು, ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ.

ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ. ಕಾನೂನು ಸುವ್ಯವಸ್ಥೆ ಮತ್ತು ರಾಜ್ಯದ ಅಭಿವೃದ್ಧಿ ಪರಸ್ಪರ ಪೂರಕವಾಗಿವೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದರು.

ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ: ಸಿಎಂ ಪ್ರಶ್ನೆ

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಅಭಿಮಾನಿಗಳಿಗೆ ಸಿಹಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ಅನುಮತಿ

BBK 12 ವಿನ್ನರ್'ಗೆ ಸಿಕ್ಕ ವೋಟು 37 ಕೋಟಿ; ಯಾರಾಗ್ತಾರೆ Winner ಸಿಕ್ಕೇ ಬಿಡ್ತು ಸುಳಿವು!

ದೇಶದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ

ಮದ್ಯಕ್ಕೆ ಲೈಸನ್ಸ್: 25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ!

'ನನ್ನ ದುಡಿಮೆ ತಿಂದು ಬದುಕುತ್ತಿದ್ದನು': ಗಂಡನ ತ್ಯಾಗ ಮರೆತ ಬಾಕ್ಸರ್ ಮೇರಿ ಕೋಮ್ ವಿರುದ್ಧ ನೆಟ್ಟಿಗರ ಆಕ್ರೋಶ!

SCROLL FOR NEXT