ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ.