ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡಸದೃಶ್ಯವಾಗಿ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.