ಸಕಲ ಸರ್ಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರನ ಅಂತ್ಯಕ್ರಿಯೆ 
ರಾಜ್ಯ

ಭೀಮಣ್ಣ ಖಂಡ್ರೆ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಸ್ವಾತಂತ್ರ್ಯ ಹೋರಾಟಗಾರನ ಅಂತ್ಯಕ್ರಿಯೆ

ಇಂದು ಸಂಜೆ ಪತ್ನಿ ಲಕ್ಷ್ಮೀಬಾಯಿ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.

ಬೆಳಗಾವಿ: ಶುಕ್ರವಾರ ರಾತ್ರಿ ನಿಧನರಾದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಶನಿವಾರ ಪಂಚಭೂತಗಳಲ್ಲಿ ಲೀನವಾಗಿದ್ದು, ಭಾಲ್ಕಿ ಹೊರವಲಯದ ಚಿಕಲ್ ಚೆಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.

ಇಂದು ಸಂಜೆ ಪತ್ನಿ ಲಕ್ಷ್ಮೀಬಾಯಿ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಚ್‌. ಕೆ‌ ಪಾಟೀಲ್​, ಎಸ್‌.ಎಸ್‌ ಮಲ್ಲಿಕಾರ್ಜುನ್​ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಚ್‌. ಕೆ‌ ಪಾಟೀಲ್​, ಎಸ್‌.ಎಸ್‌ ಮಲ್ಲಿಕಾರ್ಜುನ್​ ಸೇರಿದಂತೆ ಹಲವು ಗಣ್ಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದರು.

ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್​ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಭೀಮಣ್ಣ ಖಂಡ್ರೆಯವರ ನಿವಾಸದಿಂದ ಶಾಂತಿಧಾಮಕ್ಕೆ ತರಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!