ಕಾರವಾರ: ಕದ್ರಾ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಕಾರವಾರ ತಾಲೂಕಿನ ಕದ್ರಾ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ರೀನಾ ಹಾಗೂ ಕ್ರೀಸ್ತೋದ್ ಡಿಸೋಜಾ ದಂಪತಿಯ ಪುತ್ರಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಪ್ರಕರಣದ ಪ್ರಾಥಮಿಕ ಹಂತದಲ್ಲೇ ಅಗತ್ಯ ಕ್ರಮ ಕೈಗೊಳ್ಳದೆ, ಆರೋಪಿಯನ್ನು ಬಂಧಿಸಲು ವಿಫಲರಾದ ಆರೋಪದಡಿ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅಮಾನತಾಗಿದ್ದಾರೆ.
ರಿಶೇಲ್ ಕುಟುಂಬಸ್ಥರು ಹಾಗೂ ಸಮುದಾಯದ ಜನರು ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಸಮುದಾಯ ಹಾಗೂ ರಾಜಕೀಯ ಒತ್ತಡದ ಹಿನ್ನೆಲೆ ಕದ್ರಾ ಪಿಎಸ್‌ಐ ಸಸ್ಪೆಂಡ್ ಆಗಿದ್ದಾರೆ.
ಜೆಡಿಎಸ್ ಮುಖಂಡೆಯೊಬ್ಬರ ಪುತ್ರ ಚಿರಾಗ್ ಕಾಟದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಮಾಡಲಾಗಿತ್ತು. ಪ್ರೀತಿಸುವಂತೆ ಕಾಟ ನೀಡಿದ್ದಲ್ಲದೇ ಯುವತಿಯನ್ನು ರೇಪ್ ಮಾಡಿದ್ದಾರೆಂದು ಆರೋಪಿಸಿ ಯುವತಿ ಕುಟುಂಬ ದೂರು ನೀಡಿತ್ತು. ಅತ್ಯಾಚಾರವಾಗಿರೋ ಸಂಶಯದ ಮೇರೆಗೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಪೋಷಕರು ಒತ್ತಾಯಿಸಿದ್ದರು.