ಉತ್ಖನನ ಕಾರ್ಯ ಮುಂದುವರೆದಿರುವುದು. 
ರಾಜ್ಯ

ಲಕ್ಕುಂಡಿಯಲ್ಲಿ ಮುಂದುವರೆದ ಉತ್ಖನನ ಕಾರ್ಯ: ಪುರಾತನ ಶಿವಲಿಂಗ ಪತ್ತೆ...!

ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ.

ಗದಗ: ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಉತ್ಖನನ ಸ್ಥಳ ಪಕ್ಕದ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ.

ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ. ಸಂಪೂರ್ಣವಾಗಿ ಡೆಮಾಲಿಶ್ ಮಾಡಿದ ಶಾಲೆಯ ಗೋಡೆಯ ಭಾಗದಲ್ಲಿ ಗ್ರಾಮಸ್ಥರ ಕಣ್ಣಿಗೆ ಈ ಶಿವಲಿಂಗ ಮೊದಲು ಬಿದ್ದಿದೆ. ಈ ಲಿಂಗವು ಬಹಳ ಹಳೆಯ ಕಾಲದ್ದಾಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.

ಪುರಾತತ್ವ ಇಲಾಖೆಯು ಈ ಲಿಂಗದ ಕುರಿತು ಪರಿಶೀಲನೆ ನಡೆಸುತ್ತಿದ್ದು, ಇದು ಯಾವ ಕಾಲಮಾನಕ್ಕೆ ಸೇರಿದ್ದು ಎಂಬ ಬಗ್ಗೆ ಸ್ಪಷ್ಟಪಡಿಸಬೇಕಿದೆ.

ಮೊದಲು ಈ ಪ್ರದೇಶ ಸಪ್ತ ಗ್ರಾಮಗಳ ಅಗ್ರಹಾರವಾಗಿತ್ತು. ಈ ಅಗ್ರಹಾರ ಸೊಕಮನಕಟ್ಟಿ, ತಂಗಾಬೆಂಚಿ, ಜವಳಬೆಂಚಿ, ನರಸಿಪುರ, ಮೊಟಬಸಪ್ಪ, ಬೂದಿಬಸಪ್ಪ, ಲಕ್ಕುಂಡಿ ಗ್ರಾಮಗಳನ್ನು ಒಳಗೊಂಡಿತ್ತು.

ವಿಜಯನಗರ ಅರಸರ ಆಳಿಕ್ವೆ ಅಧಿಪತ್ಯದ ನಂತರ ಏಳು ಗ್ರಾಮದ ಜನರು ಲಕ್ಕುಂಡಿಗೆ ಬಂದು ನೆಲೆಸಿದರು. ಇಲ್ಲಿ ನಾಣ್ಯಗಳನ್ನು ತಯಾರಿಸುವ ಟಂಕಸಾಲೆಗಳಿದ್ದವು ಎಂಬ ಇತಿಹಾಸವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು ದೇಶದ ಮೇಲೆ Donald Trump ಕಣ್ಣು: ಸುಂಕದ ಬರೆಗೆ ತಿರುಗೇಟು ಕೊಟ್ಟ ಯೂರೋಪಿಯನ್ ಒಕ್ಕೂಟ!

ಗೋಲ್ಡನ್ ಟೆಂಪಲ್‌ನ ಕೊಳದಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿ ಅಪವಿತ್ರಗೊಳಿಸಿದ Muslim ವ್ಯಕ್ತಿ, Video!

Guillain-Barré Syndrome ಗೆ ಮಧ್ಯಪ್ರದೇಶದಲ್ಲಿ 2 ಸಾವು! ಏನಿದು ಸೋಂಕು? ಹೇಗೆ ಹರಡುತ್ತದೆ?

'ಬಾಳೆಹಣ್ಣು' ವಿಚಾರವಾಗಿ ಜಗಳ: ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ಉದ್ಯಮಿಗೆ ಹೊಡೆದು ಕೊಲೆ, ಮೂವರ ಬಂಧನ!

ಮೊಟ್ಟೆಯಿಡುವ ಸಮಯ! ಆಲಿವ್ ರಿಡ್ಲಿಗಳ ಆತಿಥ್ಯಕ್ಕೆ ಸಿದ್ಧವಾದ ಕುಂದಾಪುರ!

SCROLL FOR NEXT