ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

'ರಾಸಲೀಲೆ' ವಿಡಿಯೋ ವೈರಲ್​​ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ತೆರಳಿದ ಡಿಜಿಪಿ ರಾಮಚಂದ್ರ ರಾವ್​​!

ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 10 ದಿನ ರಜೆ ಹಾಕಿರುವ ರಾಮಚಂದ್ರ ರಾವ್ ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ಚರ್ಚಿಸಲಿದ್ದಾರೆ.

ಡಿಜಿಪಿ ರಾಮಚಂದ್ರ ರಾವ್
Vishwanath S
Updated On : 19 Jan 2026, 8:52 pm

ಬೆಂಗಳೂರು: ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 10 ದಿನ ರಜೆ ಹಾಕಿರುವ ರಾಮಚಂದ್ರ ರಾವ್ ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಅಧಿಕಾರಿ ವಿರುದ್ಧ ಅಮಾನತು ಆದೇಶ ಹೊರಡಿಸುವ ಸಾಧ್ಯತೆ ಇದೆ.

ರಾಮಚಂದ್ರ ರಾವ್ ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಬ್ಬಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.

ಈ ಹಿಂದೆ ತಮ್ಮ ಮಲಮಗಳು, ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರು ನೇಮಕ ಮಾಡಿತ್ತು.

Advertisement

Advertisement

Also Read

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments