ಬೆಂಗಳೂರು: ಸೋಮವಾರ ಇಲ್ಲಿನ ವಿವೇಕ್ ನಗರ ಬಳಿ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆ ಮತ್ತು ಅವರ ಮಗ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 6.45ರ ಸುಮಾರಿಗೆ ಆರ್ಮಿ ಪಬ್ಲಿಕ್ ಶಾಲೆಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮತ್ತು ಅವರ ಎಂಟು ವರ್ಷದ ಮಗು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.
ಘಟನೆ ನಂತರ ಕಾಲೇಜು ಬಸ್ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ ಮತ್ತು ಆತನ ಪತ್ತೆಗೆ ಪ್ರಯತ್ನಗಳು ಮುಂದುವರೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.