ಜನಾರ್ದನ ರೆಡ್ಡಿ  
ರಾಜ್ಯ

ಬಳ್ಳಾರಿ ಗಲಭೆ: ಸಿಬಿಐ ತನಿಖೆಗೆ ಸರ್ಕಾರ ಹಿಂದೇಟು, ಸಿದ್ದರಾಮಯ್ಯ ವಿರುದ್ಧ ಶಾಸಕ ಜಿ ಜನಾರ್ದನ ರೆಡ್ಡಿ ವಾಗ್ದಾಳಿ

ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

ಬೆಂಗಳೂರು: ಬಳ್ಳಾರಿ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹಿಂದೇಟು ಹಾಕುತ್ತಿದ್ದಾರೆ ಮತ್ತು ಅದನ್ನು ಸಿಐಡಿಗೆ ಒಪ್ಪಿಸಲು ಕಾರಣವೇನು ಎಂದು ಮಾಜಿ ಸಚಿವ, ಗಂಗಾವತಿ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಸಿದ್ದರಾಮಯ್ಯ ಅವರು ಉದ್ದೇಶಪೂರ್ವಕವಾಗಿ ವಿಷಯವನ್ನು ಬೇರೆಡೆಗೆ ತಿರುಗಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆ ಸಿಎಂ ಆಗಿದ್ದಾಗ ಏಳು ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದ್ದನ್ನು ನೆನಪಿಸಿದರು.

ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

ಇದೇ ವೇಳೆ ಬಳ್ಳಾರಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕೈಗೊಳ್ಳಲು ಬಿ ಶ್ರೀರಾಮುಲು ಅವರಿಗೆ ಬಿಜೆಪಿ ನಾಯಕತ್ವ ಗ್ರೀನ್ ಸಿಗ್ನಲ್ ನೀಡಲಿದೆ ಎಂದು ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅವ್ಯವಹಾರ ಸೇರಿದಂತೆ ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ನಡೆದ ಅನ್ಯಾಯ, ಹಿಂಸಾಚಾರವನ್ನು ಖಂಡಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣ; ಶೀಘ್ರದಲ್ಲೇ ದಕ್ಷಿಣ ಭಾರತದ ಸಿಎಂಗಳ ಸಮ್ಮೇಳನ: ಸಿದ್ದರಾಮಯ್ಯ

ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ನಿರ್ಲಕ್ಷ್ಯದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಡೆವಲಪರ್ ಬಂಧನ

ಪ್ರಮುಖ ಹುದ್ದೆ ಹೊಂದಲು ನಿರ್ದಿಷ್ಟ ಕುಟುಂಬಕ್ಕೆ ಸೇರಬೇಕಾಗಿಲ್ಲದ ಏಕೈಕ ಪಕ್ಷ ಬಿಜೆಪಿ: ನೂತನ ಅಧ್ಯಕ್ಷ ನಿತಿನ್ ನಬಿನ್

ಬೀದಿ ನಾಯಿ ವಿಷಯ ಸಂಬಂಧ ಮೇನಕಾ ಗಾಂಧಿಗೆ 'ಸುಪ್ರೀಂ' ಛೀಮಾರಿ: ಉಗ್ರ ಕಸಬ್ ಬಗ್ಗೆ ಕೋರ್ಟ್ ಪ್ರಸ್ತಾಪಿಸಿದ್ದೇಕೆ?

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು, ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!

SCROLL FOR NEXT