ಸಿಎಂ ಸಿದ್ದರಾಮಯ್ಯ 
ರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆ(SIR) ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (IEC)ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿಜವಾದ ಮತದಾರರ ಬಗ್ಗೆ ಕಾಳಜಿ ಹೊಂದಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದರು.

ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ ಓ ಗಳಿಗೆ ಸೂಚಿಸಲಾಗಿದೆ.ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ. ಜನರು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಯಲಿ ಎಂಬ ಆಗ್ರಹ ಮಾಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಶಾಸಕ ಜನಾರ್ದನರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲು ಸೇರಿದ್ದರು. "ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಅಲ್ಲಿ ಅವರಿಗೆ ನಮ್ಮ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕಿಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಲ್ಲಿಸಿರುವ ಮೊಕದ್ದಮೆ ಜನವರಿ 21 ರಂದು ವಿಚಾರಣೆಗೆ ಬರಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿಲುವು ನೀಡಲು ರಾಜ್ಯದ ಕಾನೂನು ತಂಡ ಸಿದ್ಧವಾಗಿದೆ. "ರಾಜ್ಯಗಳ ಗಡಿ ನಿರ್ಧರಿಸುವ ವಿಷಯ ಸುಪ್ರೀಂ ಕೋರ್ಟ್‌ನ ವ್ಯಾಪ್ತಿಗೆ ಬರುತ್ತದೆಯೇ ಎಂದು ನಾವು ಪ್ರಶ್ನಿಸುತ್ತೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ: Jacob Bethell ದಾಖಲೆಗಳ ಸುರಿಮಳೆ

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

SCROLL FOR NEXT