ಶಿವಮೊಗ್ಗ: ಇಲ್ಲಿನ ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 80 ವರ್ಷದ ಚಂದ್ರಪ್ಪ, 75 ವರ್ಷದ ಪತ್ನಿ ಜಯಮ್ಮ ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳು ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿವೆ. ನಿನ್ನೆಯೇ ದಂಪತಿ ಮೃತಪಟ್ಟಿದ್ದಾರೆ. ವೃದ್ಧ ದಂಪತಿ ಒಟ್ಟಿಗೆ ಮೃತಪಟ್ಟಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರಿಗೆ ಇಂದು ಬೆಳಿಗ್ಗೆ ಮಕ್ಕಳು ಕರೆ ಮಾಡಿದ್ದರು. ಆದರೆ ಎಷ್ಟೇ ಬಾರಿ ಪ್ರಯತ್ನಿಸಿದರೂ ಯಾರೂ ಮೊಬೈಲ್ ಎತ್ತದಿದ್ದಾಗ ಆತಂಕಗೊಂಡ ಮಕ್ಕಳು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳೀಯರು ಮನೆಗೆ ಹೋಗಿ ಪರಿಶೀಲಿಸಿದಾಗ ದಂಪತಿ ಮೃತಪಟ್ಟಿರುವುದು ಪತ್ತೆಯಾಗಿತ್ತು.