ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಹಾಗೂ ಎರಡು ಗೂಡ್ಸ್ ವಾಹನಾಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ಇಂದು ಸಂಜೆ ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಭೀಕರ ಅಪಘಾತದಲ್ಲಿ ಕೆಲ ಕುರಿಗಳು ಕೂಡ ಸಾವನ್ನಪ್ಪಿವೆ.
ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.