ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ: SSLC 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ!

ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಬೆಳಗ್ಗೆ 7ರ ಬದಲು 9.30ಕ್ಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅವುಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಪ್ರಿಂಟ್ ತೆಗೆದುಕೊಂಡು 10.50ಕ್ಕೆ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು: ಕಳೆದ ವಾರ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮುಂಬರುವ ಪರೀಕ್ಷೆಗಳಲ್ಲಿ ಈ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳ ಪ್ರಕಾರ, ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬದಲಾಗಿ 11 ರಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗುವ ಸಾಮಾನ್ಯ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿದೆ.

ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಬೆಳಗ್ಗೆ 7ರ ಬದಲು 9.30ಕ್ಕೆ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅವುಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಪ್ರಿಂಟ್ ತೆಗೆದುಕೊಂಡು 10.50ಕ್ಕೆ ಪರೀಕ್ಷಾ ಕೊಠಡಿಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Video

ಡೈಲಾಗ್ ಬೇಡ, ಆಡೋದ್ ಕಲಿ: ಭಾರತಕ್ಕೆ ಮಣ್ಣು ಮುಕ್ಕಿಸುತ್ತೇವೆ ಎಂದಿದ್ದ ಇರಾನ್‌ನ ಶಾಡ್ಲೌಯಿಗೆ ಸುನಿಲ್ ತಿರುಗೇಟು, Video

ಅಕ್ಟೋಬರ್ 2 ರಂದು ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ...: 'MDR ಮುಕ್ತ UPI'ಗೆ ಒತ್ತಾಯಿಸಿ ಮೊಬೈಲ್ ಚಿಲ್ಲರೆ ವ್ಯಾಪಾರಿಗಳ ಪ್ರತಿಭಟನೆ

NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು, ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ

'ನೀನು ತುಂಬಾ ಮಾತಾಡ್ತಿದ್ದೀಯಾ': ಪತ್ನಿ ಆಲಿಯಾ ಭಟ್ ಸಮ್ಮುಖದಲ್ಲೇ ಪಾಪರಾಜಿಗೆ ಗದರಿದ ರಣಬೀರ್ ಕಪೂರ್, Video!