ಸಿದ್ದರಾಮಯ್ಯ-ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ತಮಿಳುನಾಡು ಬಳಿಕ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಂಗಳೂರು: ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ ಹಿನ್ನೆಲೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು ಸಂಜೆ 5 :45ಕ್ಕೆ ಲೋಕಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಿದೆ. ನಾಳೆಯಿಂದ ಜ.31ರವರೆಗೆ ವಿಧಾನಸಭೆ ಜಂಟಿ ಅಧಿವೇಶನ ನಡೆಯಲಿದ್ದು ರಾಜ್ಯಪಾಲರ ನಡೆ ಬಹಳ ಕುತೂಹಲ ಮೂಡಿಸಿದೆ. ಕೇಂದ್ರವು MahatmaGandhi NREGA ಹೆಸರನ್ನು 'ರದ್ದುಗೊಳಿಸುವುದು' ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ-ಜೆಡಿ (ಎಸ್) ಒಕ್ಕೂಟದ ನಡುವೆ ಘರ್ಷಣೆ ನಿರೀಕ್ಷಿಸಲಾಗಿದೆ.

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ರದ್ದುಗೊಳಿಸಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯಾಗಿ ಬದಲಾಯಿಸಿದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಿರ್ಣಯ ಅಂಗೀಕರಿಸಿತ್ತು. ಎಂಜಿಎನ್‌ಆರ್‌ಇಜಿಎ ಬದಲಿಗೆ ಇತ್ತೀಚೆಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಅಂಗೀಕರಿಸದಿರಲು ಮತ್ತು ಅದರ ವಿರುದ್ಧ ಕಾನೂನು ಹೋರಾಟವನ್ನು ಕೈಗೊಳ್ಳಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಹೀಗಾಗಿ ಕೇಂದ್ರಕ್ಕೆ ಮುಜುಗರ ತರುವ ಅಂಶಗಳು ರಾಜ್ಯಪಾಲರ ಭಾಷಣದಲ್ಲಿರುವುದರಿಂದ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವೇಳೆ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಬರದಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಆರಂಭಿಸಬೇಕು ಎಂಬ ನಿಯಮವಿದೆ. ಆದ್ದರಿಂದ ಒಂದು ವೇಳೆ ಬರದಿದ್ದರೆ ದೊಡ್ಡ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿಯಿಂದ 24 ಗಂಟೆ ಅಂತಿಮ ಗಡುವು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಶಬರಿಮಲೆ ಚಿನ್ನ ಕಳವು ಪ್ರಕರಣ: EDಯಿಂದ 1.3 ಕೋಟಿ ರೂ. ಆಸ್ತಿ ಮುಟ್ಟುಗೋಲು, ಚಿನ್ನದ ಗಟ್ಟಿ ವಶಕ್ಕೆ!

ಕಂಪನಿಯ ಆದಾಯ ಶೇ.202 ರಷ್ಟು ಹೆಚ್ಚಿಸಿದ್ದ ಎಟರ್ನಲ್ ಸಿಇಒ ದೀಪಿಂದರ್ ಗೋಯಲ್ ರಾಜೀನಾಮೆ; ಕಾರಣವೇನು?

SCROLL FOR NEXT