ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್  
ರಾಜ್ಯ

MUDA Scam: ಜೈಲಿನಿಂದ ಬಿಡುಗಡೆ ಕೋರಿದ್ದ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್'ಗೆ ಹೈಕೋರ್ಟ್ ಶಾಕ್, ಜಾಮೀನು ಅರ್ಜಿ ವಜಾ

ಮುಡಾ ಮಾಜಿ ಆಯುಕ್ತರು ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಹಾಗಾಗಿ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಮಾಜಿ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

‘ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನದಿಂದ ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ ದಿನೇಶ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.

ಅರ್ಜಿದಾರರು ಸುದೀರ್ಘವಾಗಿ ಜೈಲು ವಾಸದಲ್ಲಿ ಇರುವುದಕ್ಕೆ ಅವಕಾಶ ನೀಡದಂತೆ ಶೀಘ್ರದಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿರುವ ನ್ಯಾಯಪೀಠ, ಮುಂದಿನ ಮೂರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದಲ್ಲಿ ಅರ್ಜಿದಾರರು ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ಕಾಯ್ದಿರಿಸಿದೆ.

ಮುಡಾ ಮಾಜಿ ಆಯುಕ್ತರು ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಹಾಗಾಗಿ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.

ಇದಕ್ಕೆ ಇ.ಡಿ ಪರ ವಕೀಲರು, ಪ್ರಕರಣದಲ್ಲಿಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈಗಾಗಲೇ ಆರೋಪಪಟ್ಟಿಯನ್ನು ಸಲ್ಲಿಸಲಾಗಿದ್ದು, ಅದರಲ್ಲಿ ಎಲ್ಲಾ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು ಎಂದು ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು; ನಾಲ್ವರಿಗೆ ಗಾಯ

'ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು': ಕರ್ನಾಟಕ ಮುಖ್ಯಕಾರ್ಯದರ್ಶಿ ಹೊಸ ಸುತ್ತೋಲೆ!

ರಾಜಸ್ಥಾನದಲ್ಲಿ ಶೀತ ಅಲೆ ತೀವ್ರ; ಮೌಂಟ್ ಅಬುನಲ್ಲಿ -7 ಡಿಗ್ರಿಗೆ ತಾಪಮಾನ ಕುಸಿತ, Video

ಬಾರ್ಡರ್ 2 ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್: ಮೊದಲ ದಿನ 31.10 ಕೋಟಿ ರೂ ಗಳಿಕೆ

ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್; ‘ಲ್ಯಾಂಡ್​ಲಾರ್ಡ್’ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ

SCROLL FOR NEXT