ರಾಜ್ಯ

ಬೆಂಗಳೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ

ಎರಡನೇ ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಎರಡನೇ ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಮುರುಗೇಶ್​​ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣ ಸಂಬಂಧ ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣುಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಮದುವೆಯಾಗಿತ್ತು. ಆದರೆ ಎರಡನೇ ಮಗಳು ಪ್ರೀತಿಸಿದ ಯುವಕನ ಜೊತೆ ಪರಾರಿಯಾಗಿದ್ದಳು. ಈ ವಿಚಾರ ದಂಪತಿ ನಡುವೆ ಜಗಳಕ್ಕೆ ಕಾರಣವಾಗುತ್ತಿತ್ತು. ಪತಿಯ ಕಿರುಕುಳದಿಂದ ತೀವ್ರವಾಗಿ ನೊಂದಿದ್ದ ಲಕ್ಷ್ಮೀ ಚಾಕುವಿನಿಂದ ಮುರುಗೇಶ್​​ ಎದೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಮುರುಗೇಶ್ ಮೃತಪಟ್ಟಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!