ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ  
ರಾಜ್ಯ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಕೇಂದ್ರದಲ್ಲಿ ಮೋದಿ ಸರ್ಕಾರ ವಿರುದ್ಧ ಟೀಕೆಗಳನ್ನು ಒಳಗೊಂಡಿರುವ ಕಾಂಗ್ರೆಸ್ ಸರ್ಕಾರ ರಚಿಸಿದ ಭಾಷಣದ ಪ್ಯಾರಾಗಳನ್ನು ಕೈಬಿಡದಿದ್ದರೆ, ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ರಾಜ್ಯಪಾಲ ಗೆಹ್ಲೋಟ್ ಮಾತನಾಡಲು ನಿರಾಕರಿಸಿದ್ದಾರೆ.

ರಾಜ್ಯಪಾಲರು ಸರ್ಕಾರದ ಭಾಷಣವನ್ನಲ್ಲ, ತಮ್ಮದೇ ಭಾಷಣದ ಒಂದು ವಾಕ್ಯವನ್ನು ಓದಿದರು. ಇದು ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಮಾತನಾಡುವ ಬದಲು, ಅವರು ಸ್ವತಃ ಸಿದ್ಧಪಡಿಸಿದ ಭಾಷಣವನ್ನು ಮಾಡಿದ್ದಾರೆ, ಇದು ಭಾರತೀಯ ಸಂವಿಧಾನದ ನಿಬಂಧನೆಗಳಿಗೆ ವಿರುದ್ಧವಾಗಿದೆ. ಇದು ಭಾರತೀಯ ಸಂವಿಧಾನದ 176 ಮತ್ತು 163 ನೇ ವಿಧಿಯನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ.ರಾಜ್ಯಪಾಲರ ವರ್ತನೆಯ ವಿರುದ್ಧ ನಾವು ಪ್ರತಿಭಟಿಸಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕು. ಆರ್ಟಿಕಲ್ 176 ಸ್ಪಷ್ಟವಾಗಿ ಹೇಳುತ್ತದೆ ರಾಜ್ಯಪಾಲರ ಅವರು ತಯಾರು ಮಾಡುವಂತದಹದು ಓದುವಂತಹದು ಅಲ್ಲ, ಕ್ಯಾಬಿನೆಟ್ ಏನು ತಯಾರು ಮಾಡುತ್ತದೆ ಅದನ್ನು ಓದಬೇಕು.

ಜಂಟಿ ಅಧಿವೇಶನ ಜೊತೆಗೆ ವಿಶೇಷ ಅಧಿವೇಶನ ಕರಿದಿದ್ದೆವು. ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನ ತಗೆದು, ಜಿ ರಾಮ್ ಜಿ ಹೊಸ ಕಾಯ್ದೆ ಮಾಡಿದ್ದಾರೆ. ನಮ್ಮ ಸರ್ಕಾರ ಇದನ್ನು ವಿರೋಧಿಸುತ್ತದೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ರಾಜ್ಯಪಾಲ ಗೆಹ್ಲೋಟ್ ಸಂವಿಧಾನದ ಪ್ರಕಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿಲ್ಲ. ಈ ವರ್ತನೆಯ ವಿರುದ್ಧ ನಾವು ಪ್ರತಿಭಟಿಸುತ್ತೇವೆ,ಅವರ ನಡವಳಿಕೆಯ ಕುರಿತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕೆ ಎಂದು ಸರ್ಕಾರ ಪರಿಶೀಲಿಸುತ್ತದೆ ಎಂದರು.

ರಾಜ್ಯಪಾಲರು ಇಂದು ವಿಶೇಷ ಅಧಿವೇಶನ ಆರಂಭದಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಲು ಸದನಕ್ಕೆ ಆಗಮಿಸಿ ಕೇವಲ ಒಂದೇ ವಾಕ್ಯದಲ್ಲಿ ಭಾಷಣ ಮಾಡಿ ಮುಗಿಸಿ ನಿರ್ದಮಿಸಿದ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಮೋದಿ ಸರ್ಕಾರ ವಿರುದ್ಧ ಟೀಕೆಗಳನ್ನು ಒಳಗೊಂಡಿರುವ ಕಾಂಗ್ರೆಸ್ ಸರ್ಕಾರ ರಚಿಸಿದ ಭಾಷಣದ ಪ್ಯಾರಾಗಳನ್ನು ಕೈಬಿಡದಿದ್ದರೆ, ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡುವುದಿಲ್ಲ ಎಂದು ಹೇಳಿದ್ದರು.

ಇಂದು ವಿಶೇಷ ಅಧಿವೇಶನ (Special Session) ಆರಂಭವಾಗಲಿದ್ದು, ಅಧಿವೇಶದಲ್ಲಿ ಆಡಳಿರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಿಬಿ ಜಿ ರಾಮ್​ ಜಿ ಯೋಜನೆ ವಿಚಾರಕ್ಕೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ