ಬಾಲಕಿಗೆ ಬೆದರಿಕೆ ಹಾಕುತ್ತಿರುವ ಆಗಂತುಕ 
ರಾಜ್ಯ

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಚ್ಚೆತ್ತ ಹಾಸನ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಿರಾತಕನ ಪತ್ತೆಗೆ ಬಲೆ ಬೀಸಿದ್ದರು.

ಹಾಸನ: ಶಾಲಾ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಪೋಷಕರು ಮತ್ತು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ದುಷ್ಕರ್ಮಿಯನ್ನ ಪೆನ್ಷನ್ ಮೊಹಲ್ಲಾ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಬರುವಾಗ ಈ ಕಿಡಿಗೇಡಿ ಹಿಂಬಾಲಿಸಿದ್ದ. ಬಾಲಕಿ ರಸ್ತೆಯಲ್ಲಿ ವೇಗವಾಗಿ ಹೆಜ್ಜೆ ಹಾಕುತ್ತಿದ್ದರೂ ಸಹ, ಈತ ಆಕೆಯ ಬಿಡದೆ ಮನೆಬಾಗಿಲವರೆಗೂ ಬಂದಿದ್ದ. ಇದನ್ನ ಕಂಡ ಆಕೆಯ ತಾಯಿ ಕಿರುಚಿದ್ದು, ಬಳಿಕ ಆತ ಅಲ್ಲಿಂದ ಪರಾರಿಯಾಗಿದ್ದ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಚ್ಚೆತ್ತ ಹಾಸನ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಿರಾತಕನ ಪತ್ತೆಗೆ ಬಲೆ ಬೀಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತಾಂತ್ರಿಕ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ವ್ಯಕ್ತಿಯನ್ನು ಸದ್ಯ ವಿಚಾರಣೆಗೆ ಒಳಪಡಿಸಲಾಗಿದೆ. ಈತ ಕೇವಲ ಈ ಬಾಲಕಿಯನ್ನು ಮಾತ್ರ ಹಿಂಬಾಲಿಸುತ್ತಿದ್ದನೇ ಅಥವಾ ಇತರ ಶಾಲಾ ಮಕ್ಕಳಿಗೂ ಇಂತಹ ಕಿರುಕುಳ ನೀಡುತ್ತಿದ್ದನೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ನ್ಷನ್ ಮೊಹಲ್ಲಾ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ಹಿನ್ನೆಲೆಯನ್ನು ಜಾಲಾಡುತ್ತಿದ್ದಾರೆ.

ಈತನ ಬಂಧನದಿಂದ ಹಾಸನ ನಗರದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಇಂತಹ ಘಟನೆಗಳು ಮರುಕಳಿಸದಂತೆ ಶಾಲಾ ಆವರಣ ಮತ್ತು ರಸ್ತೆಗಳಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈನ ವಸತಿ ಕಟ್ಟಡದಲ್ಲಿ ಎರಡು ಸುತ್ತು ಗುಂಡು ಹಾರಿಸಿದ ನಟ ಕಮಲ್ ಖಾನ್ ಬಂಧನ!

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ಧನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ, 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ

ಅರಣ್ಯಾಧಿಕಾರಿಗಳಿಂದ ಹುಲಿ ಶೋಧ ಕಾರ್ಯಾಚರಣೆ ಸ್ಥಗಿತ: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹೆಚ್ಚಿದ ಆತಂಕ!

ಶಬರಿಮಲೆ ಚಿನ್ನ ಕಳ್ಳತನ ವಿವಾದ: ಸೋನಿಯಾ ವಿರುದ್ಧ ಎಡಪಂಥೀಯರ ನಿಲುವಿಗೆ ರಾಹುಲ್ ಗಾಂಧಿ ಅಸಮಾಧಾನ

ಪಾಕಿಸ್ತಾನ: ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮಂದಿ ಸಾವು

SCROLL FOR NEXT