ರಾಜ್ಯ

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ...

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಹಲವು ಮಹತ್ವದ ನಿರ್ಧಾರಗಳು

* ಇಲ್ಲಿಯವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.

* ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ.

* ದಲಿತ, ಹಿಂದುಳಿದ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ‌ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.

* ರಾಜ್ಯದ 08 ಜಿಲ್ಲೆಗಳಲ್ಲಿ ಪೌಷ್ಠಿಕ ಆಹಾರ ಯೋಜನೆಯಡಿ ಒಟ್ಟು 50,046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ರೂ. 145.03 ಕೋಟಿಗಳ ಅಂದಾಜು ಮೊತ್ತದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಸಂಪುಟ ಅನುಮೋದನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ಡಾಲರ್ ದಂಡ; ಈ ತಂಡಕ್ಕೆ ಜಾಕ್‌ಪಾಟ್!

SCROLL FOR NEXT