ಕೊಲೆಗೀಡಾದ ವಿದ್ಯಾರ್ಥಿನಿ ಮತ್ತು ಆರೋಪಿ ಸಬೀರ್ ಮುಲ್ಲಾ 
ರಾಜ್ಯ

ಸ್ನೇಹಿತನೇ ಕೊಲೆಗಾರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು

ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆಯಲಾಯಿತು.

ಧಾರವಾಡ: ಮೊನ್ನೆ ಬುಧವಾರ ಧಾರವಾಡ ನಗರದ ಹೊರವಲಯದಲ್ಲಿ ಪತ್ತೆಯಾಗಿದ್ದ 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಝಕಿಯಾಮುಲ್ಲಾ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆಯಲಾಯಿತು.

ಗಾಂಧಿ ಚೌಕ್ ನಿವಾಸಿ ಜಕಿಯಾ ಇತ್ತೀಚೆಗೆ ತನ್ನ ಪ್ಯಾರಾಮೆಡಿಕಲ್ ಕೋರ್ಸ್ ನ್ನು ಪೂರ್ಣಗೊಳಿಸಿದ್ದಳು. ಮಂಗಳವಾರ ಸಂಜೆ, ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಕೆಲಸಕ್ಕೆ ಹೊರ ಹೋಗುತ್ತಿರುವುದಾಗಿ ಹೇಳಿ ಹೋದವಳು ಮನೆಗೆ ಬಂದಿರಲಿಲ್ಲ.

ಮರುದಿನ ಬೆಳಗ್ಗೆ ಮನ್ಸೂರ್ ರಸ್ತೆಯ ಬಳಿಯ ಕೃಷಿ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ಹೇಳಿದ್ದಾರೆ. ಜಕಿಯಾ ಮತ್ತು ಸಬೀರ್ ಸುಮಾರು ನಾಲ್ಕು ವರ್ಷಗಳಿಂದ ಸ್ನೇಹಿತರಾಗಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿತ್ತು.

ಜನವರಿ 20 ರ ಸಂಜೆ ಇಬ್ಬರೂ ಭವಿಷ್ಯದ ಕುರಿತು ಮಾತನಾಡುವಾಗ ಜಗಳ ತಾರಕಕ್ಕೇರಿ ಘರ್ಷಣೆ ಉಂಟಾಗಿರಬಹುದು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ, ಆದರೆ ಪ್ರಾಥಮಿಕ ಸಾಕ್ಷ್ಯವು ವಿದ್ಯಾರ್ಥಿನಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರಿಗೇ ಮಾಹಿತಿ ನೀಡಿದ್ದ ಆರೋಪಿ!

ಈ ಪ್ರಕರಣದಲ್ಲಿ ಆರೋಪಿ ಸಬೀರ್, ಕೊಲೆ ಮಾಡಿದ ಬಳಿಕ ಝಕಿಯಾ ನಾಪತ್ತೆಯಾಗಿದ್ದಾಳೆ, ಆಕೆಯನ್ನು ಹುಡುಕಿಕೊಡಿ ಎಂದು ಧಾರವಾಡ ಶಹರ ಠಾಣೆಗೆ ಹೋಗಿ ಹುಡುಕಿಕೊಡುವಂತೆ ಮನವಿ ಮಾಡಿದ್ದ. ಅಲ್ಲದೆ, ತಾನೇ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದನು. ಆ ನಂತರ ಘಟನಾ ಸ್ಥಳಕ್ಕೆ ಪೊಲೀಸರು ಬಂದಾಗಲೂ ಅಲ್ಲೇ ಇದ್ದು ಏನೂ ಅರಿಯದವನಂತೆ ನಟಿಸಿದ್ದನು. ಆದರೆ, ಆತನ ನಡವಳಿಕೆಯ ಮೇಲೆ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೇ ಕೊಲೆ ಮಾಡಿರುವ ಸತ್ಯ ಹೊರ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video