ನೋಕಿಯಾದ ಉನ್ನತ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಚಿವ ಎಂಬಿ ಪಾಟೀಲ್ 
ರಾಜ್ಯ

ಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು!

ಕರ್ನಾಟಕದ ಜೊತೆಗೆ 25 ವರ್ಷಗಳ ಸುದೀರ್ಘ ಸಹಯೋಗ ಹೊಂದಿರುವ ಬೆಂಗಳೂರಿನಲ್ಲಿ ತನ್ನ ಜಾಗತಿಕ ಅತಿದೊಡ್ಡ ಸಂಶೋಧನಾ ಕೇಂದ್ರ ಹೊಂದಿರುವ ನೋಕಿಯಾ, 2ನೆ ಶ್ರೇಣಿಯ ನಗರಗಳೂ ಸೇರಿದಂತೆ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಣೆ ಸಂಬಂಧ ಮಾತುಕತೆ ನಡೆಸಿದೆ.

ಬೆಂಗಳೂರು: ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೊರೇಷನ್‌, ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ.

ಕರ್ನಾಟಕದ ಜೊತೆಗೆ 25 ವರ್ಷಗಳ ಸುದೀರ್ಘ ಸಹಯೋಗ ಹೊಂದಿರುವ ಬೆಂಗಳೂರಿನಲ್ಲಿ ತನ್ನ ಜಾಗತಿಕ ಅತಿದೊಡ್ಡ ಸಂಶೋಧನಾ ಕೇಂದ್ರ ಹೊಂದಿರುವ ನೋಕಿಯಾ, 2ನೆ ಶ್ರೇಣಿಯ ನಗರಗಳೂ ಸೇರಿದಂತೆ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಣೆ ಸಂಬಂಧ ಮಾತುಕತೆ ನಡೆಸಿದೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ನೋಕಿಯಾದ ಉನ್ನತಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಕಂಪನಿಯ ಭವಿಷ್ಯದ ವಿಸ್ತರಣಾ ಉಪಕ್ರಮಗಳಿಗೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ಸುಸ್ಥಿರ ನಗರಾಭಿವೃದ್ಧಿಗೆ ಸಂಬಂಧಿಸಿದ 'ಯೆಸ್‌ ಬೆಂಗಳೂರು' ಉಪಕ್ರಮವು ಜಾಗತಿಕ ಮಾನ್ಯತೆ ಪಡೆದ ಸರ್ಕಾರ ಹಾಗೂ ಉದ್ಯಮ ಸಹಯೋಗದ ವೇದಿಕೆಯನ್ನಾಗಿ ಅಭಿವೃದ್ಧಿಪಡಿಸುವ ವಿಶ್ವ ಆರ್ಥಿಕ ವೇದಿಕೆಯ 'ಯೆಸ್‌- ಬಿಎಲ್‌ಆರ್‌ ಅಪ್‌ಲಿಂಕ್‌' ಉಪ ಕ್ರಮಕ್ಕೆ ರಾಜ್ಯ ಸರ್ಕಾರದ ಅಗತ್ಯ ಬೆಂಬಲ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ವಿಶ್ವ ಆರ್ಥಿಕ ವೇದಿಕೆಯ ಅಪ್‌ಲಿಂಕ್‌ ಮುಖ್ಯಸ್ಥ ಜಾನ್‌ ಡುಟೊನ್‌ ಅವರ ಜೊತೆಗಿನ ಸಭೆಯಲ್ಲಿ ಇದನ್ನು ಪ್ರಮುಖವಾಗಿ ಚರ್ಚಿಸಲಾಗಿದೆ. ನಗರ ಕೇಂದ್ರೀತ ವಾಸ್ತವಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಹಾಗೂ ನಗರಾಭಿವೃದ್ಧಿಗೆ ಕೊಡುಗೆ ನೀಡುವ ನವೋದ್ಯಮಗಳಿಗೆ ಹಣಕಾಸು ನೆರವು, ಉತ್ತೇಜನ, ಪ್ರಾಯೋಗಿಕ ಅವಕಾಶಗಳನ್ನು ಒದಗಿಸುವ ವಿಶಿಷ್ಟ ಉಪಕ್ರಮ ಇದಾಗಿದೆ. ಈ ಉಪಕ್ರಮವನ್ನು ಮುಂದುವರೆಸಿಕೊಂಡು ಹೋಗುವುದಕ್ಕೆ ಕರ್ನಾಟಕ ಸರ್ಕಾರ ನೀಡಿರುವ ಬೆಂಬಲವನ್ನು ಡಬ್ಲ್ಯುಇಎಫ್‌ ಅಪ್‌ಲಿಂಕ್‌ನ ನಿಯೋಗವು ಶ್ಲಾಘಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

'ಕ್ವಿನ್‌ ಸಿಟಿ' ಯೋಜನೆಯ ಭಾಗವಾಗುವ ಹಾಗೂ ವಿಸ್ತರಣೆ ಸಾಧ್ಯತೆಗಳ ಬಗ್ಗೆ ಸೈಬರ್‌ ಸುರಕ್ಷತೆಯ ಜಾಗತಿಕ ಕಂಪನಿ ಕ್ಲೌಡ್‌ಫ್ಲೇರ್‌ನ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದೆ. ಕಂಪನಿಯ ಭವಿಷ್ಯದ ವಿಸ್ತರಣಾ ಯೋಜನೆಗಳಿಗೆ ರಾಜ್ಯ ಸರ್ಕಾರದ ಅಗತ್ಯ ನೆರವಿನ ಭರವಸೆ ನೀಡಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಆಕರ್ಷಿಸುವುದರಲ್ಲಿ ಕರ್ನಾಟಕವು ಜಾಗತಿಕವಾಗಿ ಅತ್ಯುತ್ತಮ ತಾಣವಾಗಿದೆಯೆಂದು ಕಂಪನಿಯ ಜಾಗತಿಕ ಕಾರ್ಯತಂತ್ರ ಮುಖ್ಯಸ್ಥ ಸ್ಟೆಫಾನಿ ಕೊಹೆನ್‌ ಅವರು ಗುಣಗಾನ ಮಾಡಿದ್ದಾರೆʼ ಎಂದು ಸಚಿವರು ತಿಳಿಸಿದ್ದಾರೆ.

ಪಾಲುದಾರಿಕೆಗೆ ವಾಸ್ಟ್‌ ಸ್ಪೇಸ್‌ ಒಲವು: ಬಾಹ್ಯಾಕಾಶ ತಂತ್ರಜ್ಞಾನ, ಅತ್ಯಾಧುನಿಕ ತಯಾರಿಕೆ ಮತ್ತು ನಾವೀನ್ಯತೆ ಆಧಾರಿತ ಉಪಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಜೊತೆ ಪಾಲುದಾರಿಕೆ ಮಾಡಿಕೊಳ್ಳಲು ಅಮೆರಿಕದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ವಾಸ್ಟ್‌ ಸ್ಪೇಸ್‌ ಒಲವು ತೋರಿಸಿದೆ. ಯುಎಇ ಮೂಲದ ಬಹುರಾಷ್ಟ್ರೀಯ ಉದ್ಯಮ ಸಮೂಹವಾಗಿರುವ ಕ್ರೆಸೆಂಟ್‌ ಎಂಟರ್‌ಪ್ರೈಸಿಸ್‌ , ರಾಜ್ಯದ ಉದ್ದಿಮೆ ಹಾಗೂ ಕಂಪನಿಗಳಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದೆ.

ಸರ್ಕಾರದ ಜೊತೆ ಒಪ್ಪಂದಕ್ಕೆ ಆಸಕ್ತಿ: ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಒಪ್ಪಂದ ಮಾಡಿಕೊಳ್ಳುವುದಕ್ಕೆ ಅಮೆರಿಕದ ವೈಮಾಂತರಿಕ್ಷ ಕಂಪನಿ ವೊಯೆಜರ್‌ ಟೆಕ್ನಾಲಜೀಸ್‌ ಕಂಪನಿ ತೀವ್ರ ಆಸಕ್ತಿ ವ್ಯಕ್ತಪಡಿಸಿದೆ. ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಸಂಶೋಧನಾ ಉಪಕ್ರಮಗಳಿಗೆ ಸಂಬಂಧಿಸಿದಂತೆ ಇಸ್ರೊ ಜೊತೆ ಪಾಲುದಾರಿಕೆ ಮಾಡಿಕೊಳ್ಳುವುದಕ್ಕೂ ಮುಂದೆ ಬಂದಿದೆ. ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಾನ್‌ ಬೌಮ್‌ ಅವರ ಜೊತೆಗಿನ ಭೇಟಿಯಲ್ಲಿ, ರಾಜ್ಯದ ಬಯೊಫಾರ್ಮಾ ವಲಯದಲ್ಲಿ ಚಟುವಟಿಕೆ ವಿಸ್ತರಿಸುವ ಸಾಧ್ಯತೆಗಳನ್ನು ಚರ್ಚಿಸಲಾಗಿದೆʼ ಎಂದು ಸಚಿವ ಪಾಟೀಲ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ 2,500 ಕೋಟಿ ಅಬಕಾರಿ ಹಗರಣ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಮಹಿಳಾ ಅಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಉಡುಪಿ: ಬಸ್ - ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!

SCROLL FOR NEXT