ಬಸ್ - ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ 
ರಾಜ್ಯ

ಉಡುಪಿ: ಬಸ್-ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ

ಬೆಂಗಳೂರು ಟರ್ಫ್ ಕ್ಲಬ್‌ಗೆ 4 ಎಕರೆ ಜಮೀನು ಗುತ್ತಿಗೆ; ₹20 ಸಾವಿರ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಸಂಪುಟ ಅಸ್ತು!

ಜಗನ್ ಮೋಹನ್ ಕುಟುಂಬದ ಮದುವೆ: ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್-ನಟಿ ತ್ರಿಷಾ!

'40% ಕಮಿಷನ್ ಸರ್ಕಾರ' ಜಾಹೀರಾತು: ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್